ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ: ಶೂನ್ಯವೇಳೆಯಲ್ಲಿ ಹಿಜಾಬ್ ವಿಚಾರ ಪ್ರಸ್ತಾಪಿಸಿದ ಎಲ್ ಹನುಮಂತಯ್ಯ

|
Google Oneindia Kannada News

ದೆಹಲಿ, ಫೆಬ್ರವರಿ 8: ಉಡುಪಿಯಲ್ಲಿ ಶುರುವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದೆ.

ಹಿಜಾಬ್ ವಿಚಾರ ಇದೀಗ ರಾಜ್ಯಸಭೆಯಲ್ಲೂ ಗದ್ದಲ ಉಂಟು ಮಾಡಿದೆ, ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಿಸಿರುವುದು ಅವರ ಹಕ್ಕಿಗೆ ಧಕ್ಕೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ.

ಸರ್ಕಾರ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಿ ಆದೇಶ ನೀಡಿದೆ. ಅಲ್ಲದೆ, ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿದೆ. ಈ ಮಧ್ಯೆ ಉಡುಪಿಯಲ್ಲಿ ಆರಂಭವಾದ ವಿವಾದ ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ತುಮಕೂರು, ಮೈಸೂರು, ದಾವಣಗೆರೆ, ಬೀದರ್, ಗದಗ. ವಿಜಯಪುರ, ಬಾಗಲಕೋಟೆ ಹೀಗೆ ಮಲೆನಾಡು, ಉತ್ತರ ಕರ್ನಾಟಕ ಭಾಗವನ್ನು ಕೂಡ ಆವರಿಸಿದೆ.

Hijab Row Echoes In Rajya Sabha, During Zero Hour

ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಹಿಂದೂ ಸಮುದಾಯದ ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ.

ಹಿಜಾಬ್, ಕೇಸರಿ ಶಾಲು ವಿವಾದ ಗದಗ ಜಿಲ್ಲೆಗೂ ವ್ಯಾಪಿಸಿದೆ. ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಪ್ರವೇಶ ಮಾಡಿದ್ದಾರೆ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಗದಗದ ಹಳೆ ಕೋರ್ಟ್ ಆವರಣದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಗೂ ಹಿಜಾಬ್ ಗದ್ದಲ ಹರಡಿಕೊಂಡಿದೆ. ಜಿಲ್ಲೆಯ ಹೊನ್ನಾಳಿ ಸರ್ಕಾರಿ ಪದವಿ ಕಾಲೇಜ್ ನಲ್ಲಿ ಹಿಜಾಬ್ ಧರಿಸುವುದನ್ನ ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲ್ ಹಾಕಿಕೊಡು ಬಂದಿದ್ದಾರೆ.

ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಎರಡು ಗುಂಪುಗಳ ಜೊತೆ ಮಾತುಕತೆ ನಡೆಸಿ ಕಾಲೇಜುಗಳಲ್ಲಿ ಸಂಘರ್ಷ ಸರಿಯಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪೊಲೀಸರ ತಡೆ ಒಡ್ಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು, ಪೊಲೀಸರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ತರಗತಿಗೆ ಪ್ರವೇಶ ಮಾಡಿದ್ದಾರೆ. ಕೇಸರಿ ಶಾಲು ಹಾಕಿ ಬಂದಿದ್ದಕ್ಕೆ ಪ್ರಾಂಶುಪಾಲರ ಆಕ್ಷೇಪ ಕೇಳಿಬಂದಿದೆ. ಕಾಲೇಜಿಗೆ ಪೊಲೀಸರನ್ನು ಕರೆಸಿ ವಿದ್ಯಾರ್ಥಿಗಳಿಗೆ ವಾರ್ನಿಂಗ್ ಮಾಡಿಸಲಾಗಿದೆ.

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಉಡುಪಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಬುರ್ಖಾ ಧರಿಸಿ ಬಂದಿದ್ದ 22 ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ.

ಹಿಜಾಬ್ ವಿವಾದ: ಶಾಲೆಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಲು ಮುಂದಾದ ಬಿಬಿಎಂಪಿಹಿಜಾಬ್ ವಿವಾದ: ಶಾಲೆಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಲು ಮುಂದಾದ ಬಿಬಿಎಂಪಿ

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲು ಆಗ್ರಹ ಚಿಕ್ಕಮಗಳೂರು ನಗರದಲ್ಲಿ ಕೂಡ ಕೇಳಿಬಂದಿದೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಗಿದೆ.

ಕೇಸರಿ ಶಾಲು ಧರಿಸಿ ಕಾಲೇಜಿನೊಳಗೆ ತೆರಳಿದ್ದಕ್ಕೆ ವಿರೋಧ ವ್ಯಕ್ತವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಸರ್ಕಾರಿ ಪದವಿ ಕಾಲೇಜು ಬಳಿ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶಕ್ಕೆ ಆಗ್ರಹ ಕೇಳಿಬಂದಿದೆ.

English summary
The echoes of Karnataka’s hijab row were heard in the Rajysabha after RS Member L Hanumantaiah raised the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X