ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್-19: ಹಿಮಾಚಲ ಪ್ರದೇಶದಲ್ಲಿ ಮತ್ತೆ ಲಾಕ್ ಡೌನ್ ನಿಯಮ!

|
Google Oneindia Kannada News

ನವದೆಹಲಿ, ನವೆಂಬರ್.23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಹಿಮಾಚಲ ಪ್ರದೇಶದಲ್ಲಿ ಹಲವು ರೀತಿ ನಿರ್ಬಂಧಗಳನ್ನು ವಿಧಿಸುವುದಕ್ಕೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ನೇತೃತ್ವದ ಸರ್ಕಾರವು ತೀರ್ಮಾನಿಸಿದೆ.

ರಾಜ್ಯದಲ್ಲಿ ಕೊವಿಜಡ್-19 ಸೋಂಕಿನ ಸ್ಥಿತಿಗತಿ ಕುರಿತು ಜಿಲ್ಲಾವಾರು ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಸಭೆ ನಡೆಸಿದರು. ಈ ವೇಳೆ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಮೇಲೆ ಲಕ್ಷ್ಯ ವಹಿಸುವಂತೆ ಸೂಚಿಸಲಾಯಿತು.

Covid-19 Vaccine: ತುರ್ತು ಸಂದರ್ಭದಲ್ಲಿ ಆಸ್ಟ್ರಾಜೆನಿಕಾ ಲಸಿಕೆ ಬಳಸಲು ಅನುಮತಿCovid-19 Vaccine: ತುರ್ತು ಸಂದರ್ಭದಲ್ಲಿ ಆಸ್ಟ್ರಾಜೆನಿಕಾ ಲಸಿಕೆ ಬಳಸಲು ಅನುಮತಿ

ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಸೇರುವುದಕ್ಕೆ ಸರ್ಕಾರದಿಂದ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಕೊರೊನಾವೈರಸ್ ಸೋಂಕು ಹರಡದಿರಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಮನೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಬಗ್ಗೆಯೂ ಲಕ್ಷ್ಯ ವಹಿಸುವುದು ಸೂಚಿಸಲಾಗಿದೆ.

Himachal Pradesh: Amid Covid-19 Cases Rise Lockdown Restrictions Likely To Return In State


ಕೊವಿಡ್-19 ಸೋಂಕಿತರಿಗೆ ನಿತ್ಯ ತಪಾಸಣೆ:

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿರುವ ರೋಗಗಳ ದೇಹದ ಉಷ್ಣಾಂಶ(ಜ್ವರ) ಮತ್ತು ಆಮ್ಲಜನಕದ ಪ್ರಮಾಣವನ್ನು ಪ್ರತಿನಿತ್ಯ ತಪಾಸಣೆ ನಡೆಸುವುದು. ರೋಗಿಗಳಿಗೆ ಶೀತವಾಗದ ರೀತಿ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ಬಿಸಿ ಆಹಾರ ಮತ್ತು ಬಿಸಿ ನೀರನ್ನು ಪೂರೈಸುವುದಕ್ಕೆ ತಿಳಿಸಲಾಗಿದೆ.

"ಆರೋಗ್ಯ ಅಧಿಕಾರಿಗಳು ಪಿಪಿಇ ಕಿಟ್‌ಗಳನ್ನು ಒದಗಿಸುವ ಮೂಲಕ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ಹಾಜರಾಗಲು ಪರಿಚಾರಕರನ್ನು ಪ್ರೇರೇಪಿಸುವ ಪ್ರಯತ್ನಗಳನ್ನು ಮಾಡಬೇಕು. ಕೊವಿಡ್-19 ರೋಗಿಗಳನ್ನು ಆರಂಭಿಕ ಹಂತದಲ್ಲಿ ಪ್ರಮುಖ ಆಸ್ಪತ್ರೆಗಳಿಗೆ ಕರೆದೊಯ್ಯಬೇಕು. ಇದರಿಂದ ಬದುಕುಳಿಯುವವರ ಪ್ರಮಾಣ ಹೆಚ್ಚಾಗುತ್ತದೆ, "ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 627 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 34327ಕ್ಕೆ ಏರಿಕೆಯಾಗಿದೆ. 19 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯು 528ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 26733 ಸೋಂಕಿತರು ಗುಣಮುಖರಾಗಿದ್ದು, 7032 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

Recommended Video

Covid Vaccine ಹಂಚುವಿಕೆ ಬಗ್ಗೆ ಮುಖ್ಯಮಂತ್ರಿಗಳ ಸಭೆ ಕರೆದ Modi | Oneindia Kannada

English summary
Himachal Pradesh: Amid Covid-19 Cases Rise Lockdown Restrictions Likely To Return In State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X