ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ನಿವಾಸದಲ್ಲಿ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಆತ್ಮಹತ್ಯೆ

|
Google Oneindia Kannada News

ನವದೆಹಲಿ, ಮಾರ್ಚ್ 17: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರು ದೆಹಲಿಯ ನಾರ್ತ್ ಅವೆನ್ಯೂದಲ್ಲಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಶರ್ಮಾ ಅವರ ಸಾವಿನ ಮಾಹಿತಿ ತಿಳಿದ ಬಿಜೆಪಿ, ಇಂದು ನಡೆಯಬೇಕಿದ್ದ ಸಂಸದೀಯ ಪಕ್ಷದ ಸಭೆಯನ್ನು ರದ್ದುಗೊಳಿಸಿದೆ. ಅವರ ಆರೋಗ್ಯ ಕಳೆದ ಕೆಲವು ತಿಂಗಳಿನಿಂದ ಚೆನ್ನಾಗಿರಲಿಲ್ಲ ಎನ್ನಲಾಗಿದೆ. ಆದರೆ ಅವರ ಸಾವಿಗೆ ಕಾರಣ ಗೊತ್ತಾಗಿಲ್ಲ. ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.

ಮುಂಗೈ ಕತ್ತರಿಸಿಕೊಂಡು ಬಿಜೆಪಿ ಸಂಸದನ ಸೊಸೆ ಆತ್ಮಹತ್ಯೆಗೆ ಯತ್ನಮುಂಗೈ ಕತ್ತರಿಸಿಕೊಂಡು ಬಿಜೆಪಿ ಸಂಸದನ ಸೊಸೆ ಆತ್ಮಹತ್ಯೆಗೆ ಯತ್ನ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ 1958ರಲ್ಲಿ ಜನಿಸಿದ್ದ ಶರ್ಮಾ, 2014ರಲ್ಲಿ ಮೊದಲ ಬಾರಿ ಸಂಸತ್‌ಗೆ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಅವರು ಮಂಡಿಯಿಂದ ಎರಡನೆಯ ಬಾರಿ ಚುನಾಯಿತರಾಗಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ರಾಮ್ ಸ್ವರೂಪ್ ಶರ್ಮಾ ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ.

 Himachal Pradesh BJP MP Ram Swaroop Sharma Dead At Delhi Residence: Suicide Suspected

'ಅವರು ತಮ್ಮ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಠಡಿ ಒಳಗಿನಿಂದ ಚಿಲಕ ಹಾಕಿತ್ತು. ಯಾವುದೇ ಆತ್ಮಹತ್ಯಾ ಚೀಟಿ ಪತ್ತೆಯಾಗಿಲ್ಲ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಕರೆಗೆ ಶರ್ಮಾ ಅವರು ಸ್ಪಂದಿಸದೆ ಇದ್ದಾಗ ಗಾಬರಿಗೊಂಡ ಅವರ ಆಪ್ತ ಸಹಾಯಕ, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಕೂಡಲೇ ಅವರ ಮನೆಗೆ ತೆರಳಿದ ಪೊಲೀಸರ ತಂಡ, ಬಾಗಿಲು ಒಡೆದು ಒಳ ಪ್ರವೇಶಿಸಿದೆ. ಆಗ ಅವರು ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ.

ಶರ್ಮಾ ಅವರು ದೆಹಲಿಯ ನಿವಾಸದಲ್ಲಿ ಒಂಟಿಯಾಗಿದ್ದರು. ಅವರ ಪತ್ನಿ ಚಾರ್ ಧಾಮ್ ಯಾತ್ರಾ ಸ್ಥಳಕ್ಕೆ ತೆರಳಿದ್ದರು. ಕಳೆದ ಆರು ತಿಂಗಳಿನಿಂದ ಅವರು ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ್ ಸ್ವರೂಪ್ ಶರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ, "ಶ್ರೀ ರಾಮ್ ಸ್ವರೂಪ್ ಶರ್ಮಾ ಒಬ್ಬ ಸಮರ್ಪಿತ ನಾಯಕರಾಗಿದ್ದರು, ಅವರು ಸದಾ ಜನರ ಸಮಸ್ಯೆ ಪರಿಹರಿಸಲು ಬದ್ಧರಾಗಿದ್ದರು. ಅವರು ಸಮಾಜದ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸುತ್ತಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರು ಮತ್ತು ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

English summary
Himachal Pradesh's Mandi BJP MP Ram Swaroop Sharma dead at his Delhi residence: Police suspects suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X