ಸಲ್ಮಾನ್ ವಿರುದ್ಧ 'ಮಹಾ' ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

Posted By:
Subscribe to Oneindia Kannada

ನಟ ಸಲ್ಮಾನ್ ಖಾನ್ ವಿರುದ್ಧದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಖುಲಾಸೆ ಮಾಡಿ ನೀಡಿದ್ದ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿದೆ. ಹನ್ನೆರಡು ವಾರಗಳ ಹಿಂದೆ ಮೇಲ್ಮನವಿ ಸಲ್ಲಿಸಲಾಗಿತ್ತು. 2002ರಲ್ಲಿ ಈ ಘಟನೆ ನಡೆದಿತ್ತು.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಎ.ಎಂ.ಖನ್ ವಿಲ್ಕರ್ ಮತ್ತು ನ್ಯಾ.ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವು, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಪಟ್ಟಿ ಮಾಡುವುದಾಗಿ ಹೇಳಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಂಬೆ ಹೈ ಕೋರ್ಟ್ ಸಲ್ಮಾನ್ ಖಾನ್ ರನ್ನು ಖುಲಾಸೆಗೊಳಿಸಿತ್ತು.

ಗುದ್ದೋಡು ಪ್ರಕರಣ: ಸಲ್ಮಾನ್ ಗೆ ಮತ್ತೆ ಸಂಕಟ, ಸುಪ್ರೀಂನಿಂದ ನೋಟಿಸ್

ಮಹಾರಾಷ್ಟ್ರ ಸರಕಾರ ಸಲ್ಲಿಸಿದ ಮೇಲ್ಮನವಿ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ವರ್ಷದ ಫೆಬ್ರವರಿಯಲ್ಲಿ ಸಲ್ಮಾನ್ ಖಾನ್ ರ ಪ್ರತಿಕ್ರಿಯೆ ಕೇಳಿತ್ತು. ಮುಂಬೈನ ಬಾಂದ್ರಾ ಸಮೀಪ ನಡೆದಿದ್ದ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ನಾಲ್ವರಿಗೆ ಗಾಯಗಳಾಗಿದ್ದವು. ವಿಚಾರಣೆ ಕೋರ್ಟ್ ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಐದು ವರ್ಷದ ಜೈಲು ಶಿಕ್ಷೆ ವಿಧಿಸಿತ್ತು.

Salman Khan

ಮಹಾರಾಷ್ಟ್ರ ಸರಕಾರ ಬಾಂಬೆ ಹೈ ಕೋರ್ಟ್ ನೀಡಿದ ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, ಪೊಲೀಸರು ಹಾಗೂ ಗಾಯಗೊಂಡಿದ್ದವರ ಹೇಳಿಕೆಯನ್ನು ಕೋರ್ಟ್ ಪರಿಗಣಿಸಿಲ್ಲ. ಅಪಘಾತ ನಡೆದಾಗ ಕಾರನ್ನು ಸಲ್ಮಾನ್ ಖಾನ್ ಚಲಾಯಿಸುತ್ತಿದ್ದರು ಎಂದು ಹೇಳಿದೆ.

ಸಲ್ಮಾನ್ ಖಾನ್ ಅವರಿಗೆ ಒದಗಿಸಿದ್ದ ರಕ್ಷಣಾ ಸಿಬ್ಬಂದಿ, ಪೊಲೀಸ್ ಕಾನ್ ಸ್ಟೇಬಲ್ ಕೂಡ ಅಪಘಾತದ ಸಂದರ್ಭದಲ್ಲಿ ನಟ ಸಲ್ಮಾನ್ ಖಾನ್ ಕಾರು ಚಲಾಯಿಸುತ್ತಿದ್ದ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸರಕಾರ ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court today agreed to hear after 12 weeks the appeal of Maharashtra government challenging the acquittal of Bollywood superstar Salman Khan in the 2002 hit-and-run case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ