ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಹುಸಿ ಬಾಂಬ್ ಕರೆ
ನವದೆಹಲಿ, ಜುಲೈ 02 : ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಶನಿವಾರ ಅನಾಮಧೇಯ ವ್ಯಕ್ತಿಯೊಬ್ಬ ಮಾಡಿದ್ದ ಹುಸಿ ಬಾಂಬ್ ಬೆದರಿಕೆ ಕರೆಯೊಂದು ಕೆಲಕಾಲ ಆಂತಕ ಸೃಷ್ಟಿಸಿತ್ತು
ರಾತ್ರಿ 8.40ರ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ಮಾಡಿ, ಕಚೇರಿಯೊಳಗೆ ಬಾಂಬ್ ಇರಿಸಲಾಗಿದೆ ಎಂದು ಹೇಳಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳ ತೀವ್ರ ತಪಾಸಣೆ ನಡೆಸಿದ್ದಾರೆ. ಆದರೆ, ಗಂಟೆಗಳ ಕಾಲ ತಪಾಸಣೆ ನಡೆಸಿದರೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ದೊರಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪುಣೆ ಮೂಲದ ಸೆಲ್ಯೂಲರ್ ಕಂಪನಿ ಮೂಲದ ಸಂಖ್ಯೆಯಿಂದ ಕರೆ ಬಂದಿತ್ತು. ಆದರೆ, ಕಂಪನಿ ಕುರಿತಂತೆ ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.












Click it and Unblock the Notifications