ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾವೈರಸ್ ಪಾಸಿಟಿವ್!

ನವದೆಹಲಿ, ಆಗಸ್ಟ್.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಸ್ವತಃ ಕೇಂದ್ರ ಸಚಿವರೇ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ರಕ್ತ ಮತ್ತು ಗಂಟಲು ದ್ರವದ ತಪಾಸಣೆಗೆ ಒಳಗಾದ ಸಂದರ್ಭದಲ್ಲಿ ವೈದ್ಯಕೀಯ ನೀಡಿರುವ ಅಂತಿಮ ವರದಿಯಲ್ಲಿ ಕೊವಿಡ್-19 ಸೋಂಕು ತಗಲಿರುವುದು ಖಾತ್ರಿಯಾಗಿದೆ. ನವದೆಹಲಿಯ ಮೇದಾಂತ ಆಸ್ಪತ್ರೆಗೆ ಅಮಿತ್ ಶಾ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Home Minister Amit Shah Tested Coronavirus Positive

ಕಳೆದ ಕೆಲವು ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರು ಕೊರೊನಾವೈರಸ್ ಸೋಂಕು ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಕ್ವಾರೆಂಟೈನ್ ನಲ್ಲಿ ಇರಬೇಕು ಎಂದು ಅಮಿತ್ ಶಾ ಅವರು ಟ್ವಿಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಧ್ಯಪ್ರದೇಶ ಸಿಎಂ ಜೊತೆಗೆ ಸಂಪರ್ಕ:

ಕಳೆದ ಜುಲೈ.25ರಂದು ಮಧ್ಯಪ್ರದೇಶ ಮುಖ್ಯಮಂತ್ರಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೂ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿತ್ತು. ಈ ಹಿನ್ನೆಲೆ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಶಿವರಾಜ್ ಸಿಂಗ್ ಚೌವ್ಹಾಣ್ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದರು ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+