ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್
ನವದೆಹಲಿ, ಆಗಸ್ಟ್ 14: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅವರೇ ಸ್ವತಃ ಟ್ವೀಟ್ ಮಾಡಿದ್ದು, ತಾವು ಕೊರೊನಾದಿಂದ ಮುಕ್ತರಾಗಿರುವ ಬಗ್ಗೆ ಹೇಳಿದ್ದಾರೆ. ಇಂದು ಅವರ ಕೊರೊನಾ ಪರೀಕ್ಷಾ ವರದಿ ಲಭ್ಯವಾಗಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಲ್ಲಿ ಬಂದಿದೆ.
ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅಮಿತ್ ಶಾ ಅವರಲ್ಲೇ ಅಲ್ಲ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿತ್ತು.

ನಾನು ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ಶುಭ ಹಾರೈಸುವ ಮೂಲಕ ಆಶೀರ್ವಧಿಸಿದ ಎಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾ ಸಂದರ್ಭದಲ್ಲಿ ತಮಗೆ ಚಿಕಿತ್ಸೆ ನೀಡಿದ ವೇದಾಂತಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗೆ ಅಮಿತ್ ಶಾ ಧನ್ಯವಾದ ತಿಳಿಸಿದ್ದಾರೆ.












Click it and Unblock the Notifications