ಗೃಹ ಸಚಿವರಿಂದ ಜಮ್ಮು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಕಾಯ್ದೆ ಮಂಡನೆ
ನವದೆಹಲಿ, ಫೆಬ್ರುವರಿ 05: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾಜ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ (ತಿದ್ದುಪಡಿ) 2021 ಮಂಡನೆ ಮಾಡಲಿರುವುದಾಗಿ ತಿಳಿದುಬಂದಿದೆ.
ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ (ತಿದ್ದುಪಡಿ) 2021ರ ಅಗತ್ಯದ ಕುರಿತು ವಿವರ ನೀಡಲಿರುವ ಅವರು, ಕಾಯ್ದೆ ಮಂಡಿಸುವುದಾಗಿ ತಿಳಿದುಬಂದಿದೆ.
ಆಗಸ್ಟ್ 5 ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ 2019 ಅನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿತ್ತು. ಮರುದಿನ ಆಗಸ್ಟ್ 6 ರಂದು ಲೋಕಸಭೆಯಲ್ಲಿ ಕಾಯ್ದೆಗೆ ಅಂಗೀಕಾರ ದೊರೆತಿತ್ತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ 2019 ಮಸೂದೆಯನ್ನು ಮಂಡಿಸಿತ್ತು. ಮಸೂದೆ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ಹೊಂದಿರುತ್ತದೆ ಎನ್ನಲಾಗಿದೆ.

ಇದೀಗ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ರಾಜ್ಯ ಗೃಹ ಸಚಿವ ಜಿ ಕೃಷ್ಣ ರೆಡ್ಡಿ ಗುರುವಾರ ಈ ಕಾಯ್ದೆಯನ್ನು ರಾಜ್ಯ ಸಭೆಯಲ್ಲಿ ಮಂಡಿಸಿದ್ದರು.












Click it and Unblock the Notifications