ಮೋದಿ ಸಾಧನೆ ಪ್ರಚಾರಕ್ಕೆ ಬಿಜೆಪಿಯಿಂದ ತರಹೇವಾರಿ ಯೋಜನೆ!

Recommended Video

      ಎಚ್ ಡಿ ಕುಮಾರಸ್ವಾಮಿ ಮಾತು ಕೇಳಿ ಬೇಸರಗೊಂಡ ರೈತ ಆತ್ಮಹತ್ಯೆ |Oneindia Kannada

      ನವದೆಹಲಿ, ಮೇ 26: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ನಾಲ್ಕು ವರ್ಷ ತುಂಬುತ್ತಿರುವ ಸಮಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಬಿಜೆಪಿ ಹಮ್ಮಿಕೊಂಡಿದೆ.

      15 ದಿನಗಳಲ್ಲಿ ರಾಷ್ಟ್ರದಾದ್ಯಂತ 1 ಲಕ್ಷಕ್ಕೂ ಹೆಚ್ಚು ಪ್ರಸಿದ್ಧ ವ್ಯಕ್ತಿಗಳನ್ನು ಭೇಟಿ ಮಾಡಿ ಅವರ ಮೂಲಕ ತಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಯತ್ನ ಮಾಡಲಿದೆ. ವಿವಿಧ ಕ್ಷೇತ್ರದ ಗಣ್ಯರ ಮೂಲಕ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಇದಾಗಿದೆ.

      ಈ ಹಿನ್ನೆಲೆಯಲ್ಲಿ ಸಂಸದರು, ಶಾಸಕರು, ಮೇಯರ್ ಗಳು ಸೇರಿದಂತೆ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಗಣ್ಯರು ಮೇ 27 ರಿಂದ ರಾಷ್ಟ್ರದ ಮೂಲೆ ಮೂಲೆಗಳಿಗೆ ತೆರಳಿ ಸರ್ಕಾರ ಸಾಧನೆಗಳನ್ನು ಮನದಟ್ಟುಮಾಡಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನೂ, ಕಾರ್ಯಕ್ರಮದ ರೂಪುರೇಷೆಗಳನ್ನೂ ಬಿಜೆಪಿ ಈಗಾಗಲೇ ಸಿದ್ಧಪಡಿಸಿಕೊಂಡಿದೆ.

      How BJP plans to highlight governments work on 4th anniversary

      ಒಟ್ಟಿನಲ್ಲಿ 2019 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಪನಗದೀಕರ, ಜಿಎಸ್ಟಿಯಂಥ ಕ್ರಾಂತೀಕಾರಿ ನಿರ್ಧಾರಗಳಿಂದ ದೇಶಕ್ಕಾದ ಲಾಭವನ್ನು ಜನರಿಗೆ ಮನದಟ್ಟುಮಾಡುವುದು ಬಿಜೆಪಿಗೆ ಅಗತ್ಯವಾಗಿದೆ.

      ಅತ್ತ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿಶ್ವಾಸಘಾತ ದಿವಸ್ ಆಚರಿಸಲು ನಿರ್ಧರಿಸಿದ್ದು, ದೇಶದ ಪ್ರಮುಖ ನಗರಗಳಲ್ಲಿ ಸುದ್ದಿಗೋಷ್ಠಿ ನಡೆಸಿ ಎನ್ ಡಿಎ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಯತ್ನ ಮಾಡಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+