ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿ: ಉಚಿತವಾಗಿ ಕೊವಿಡ್-19 ಲಸಿಕೆ ನೀಡಲು 89 ಕೇಂದ್ರಗಳು ಫಿಕ್ಸ್!

|
Google Oneindia Kannada News

ನವದೆಹಲಿ, ಜನವರಿ.11: ಕೊರೊನಾವೈರಸ್ ಸೋಂಕಿಗೆ ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ದಿನಾಂಕ ನಿಗದಿಗೊಳಿಸಿದೆ. ಜನವರಿ.16ರಿಂದ ದೇಶಾದ್ಯಂತ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೇಂದ್ರ ಸರ್ಕಾರವು ಅನುಮೋದನೆ ನೀಡಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲು 89 ಕಡೆಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ 36 ಆಸ್ಪತ್ರೆಗಳು ಮತ್ತು 53 ಖಾಸಗಿ ಆಸ್ಪತ್ರೆಗಳು ಈ ಪಟ್ಟಿಯಲ್ಲಿ ಸೇರಿವೆ.

ಕೊರೊನಾ ಲಸಿಕೆ ವಿಚಾರ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆಕೊರೊನಾ ಲಸಿಕೆ ವಿಚಾರ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

ಸರ್ಕಾರಿ ಆಸ್ಪತ್ರೆಗಳ ಪಟ್ಟಿಯಲ್ಲಿ ಏಮ್ಸ್, ಸಫ್ದರ್ ಜಂಗ್, ಲೋಕ್ ನಾಯಕ್, ಜಿಟಿಬಿ, ಕಸ್ತೂರ್ ಬಾ ಮತ್ತು ಹಿಂದೂ ರಾವ್ ಆಸ್ಪತ್ರೆಗಳಿವೆ. ಇನ್ನು, ಖಾಸಗಿ ಆಸ್ಪತ್ರೆಗಳ ಪೈಕಿ ಮ್ಯಾಕ್ಸ್, ಫೋರ್ಟಿಸ್, ಅಪೋಲೋ, ಬಿಎಲ್ ಕಪೂರ್ ಮತ್ತು ಗಂಗಾರಾಮ್ ಆಸ್ಪತ್ರೆಗಳಲ್ಲಿ ಕೊವಿಡ್-19 ಲಸಿಕೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ.

 How Delhi Govt Prepared To Coronavirus Vaccine Distribution: 89 Vaccine Sites

ನವದೆಹಲಿ ಸರ್ಕಾರದಿಂದ ಉಚಿತ ಲಸಿಕೆ:

ಕೊರೊನಾವೈರಸ್ ಸೋಂಕಿನಿಂದ ಹಲವು ರೀತಿಯ ಸವಾಲುಗಳನ್ನು ಎದುರಿಸಿರುವ ದೆಹಲಿ ಸರ್ಕಾರವು ತನ್ನ ಪ್ರಜೆಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಈಗಾಗಲೇ ಘೋಷಿಸಿದೆ. ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿರುವ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆ ಬಳಸಲು ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು.

ಕಳೆದ ಶನಿವಾರ ಕೇಂದ್ರ ಸರ್ಕಾರವು ಕೊವಿಡ್-19 ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿತ್ತು. ಜನವರಿ.16ರಿಂದ ಲಸಿಕೆ ವಿತರಣೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ 3 ಕೋಟಿ ಜನರಿಗೆ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆ ಕೊಡುವುದಾಗಿ ತಿಳಿಸಿತ್ತು. ಎರಡನೇಯದಾಗಿ 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಕೊರೊನಾವೈರಸ್ ಲಸಿಕೆ ನೀಡುವುದು ಪ್ರಮುಖ ಆದ್ಯತೆಯಾಗಿದೆ. ಒಟ್ಟಾರೆಯಾಗಿ 27 ಕೋಟಿ ಜನರಿಗೆ ಮೊದಲ ಹಂತದಲ್ಲಿ ಕೊವಿಡ್-19 ಲಸಿಕೆಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿತ್ತು.

English summary
How Delhi Govt Prepared To Coronavirus Vaccine Distribution: Here Get Information About 89 Vaccine Sites.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X