'ನಾನು ಸಸ್ಯಾಹಾರಿ, ಈರುಳ್ಳಿ ತಿನ್ನುವುದಿಲ್ಲ, ಹೀಗಾಗಿ ಬೆಲೆ ಗೊತ್ತಾಗೋದು ಹೇಗೆ?'
ನವದೆಹಲಿ, ಡಿಸೆಂಬರ್ 5: ತಮ್ಮ ಕುಟುಂಬದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೇಳಿಕೆ ನೀಡಿದ ಮರುದಿನ ಮತ್ತೊಬ್ಬ ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾವು ಸಸ್ಯಾಹಾರಿಯಾಗಿರುವುದರಿಂದ ಈರುಳ್ಳಿ ತಿನ್ನುವುದಿಲ್ಲ ಎಂದು ಕೇಂದ್ರ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿರುವ ಅಶ್ವಿನಿ ಚೌಬೆ, ಇದುವರೆಗೂ ತಾವು ಈರುಳ್ಳಿಯ ರುಚಿಯನ್ನೇ ನೋಡಿಲ್ಲ. ಹೀಗಾಗಿ ತಮಗೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯ ಬಗ್ಗೆ ತಿಳಿಯಲೂ ಅಸಾಧ್ಯ ಎಂದು ಹೇಳಿಕೊಂಡಿದ್ದಾರೆ.
'ನಾನು ಸಸ್ಯಾಹಾರಿ. ನಾನು ಈರುಳ್ಳಿಯ ರುಚಿಯನ್ನೇ ನೋಡಿಲ್ಲ. ಹೀಗಿರುವಾಗ ನನ್ನಂತಹ ವ್ಯಕ್ತಿಗೆ ಈರುಳ್ಳಿಯ ಮಾರುಕಟ್ಟೆ ದರದ ಪರಿಸ್ಥಿತಿ ಹೇಗೆ ತಿಳಿಯಲು ಸಾಧ್ಯ?' ಎಂದು ಹೇಳಿದ್ದಾರೆ.

ತಾವು ಈರುಳ್ಳಿ-ಬೆಳ್ಳುಳ್ಳಿ ತಿನ್ನುವ ಕುಟುಂಬಕ್ಕೆ ಸೇರಿಲ್ಲ ಎಂದಿದ್ದ ನಿರ್ಮಲಾ ಸೀತಾರಾಮನ್ ಅವರನ್ನು ಅಣಕಿಸಿದ್ದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಈರುಳ್ಳಿ ತಿನ್ನುವುದಿಲ್ಲ ಎನ್ನುವ ಹಣಕಾಸು ಸಚಿವರು ಅದರ ಬೆಲೆ ಏರಿಕೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಏನು ತಿನ್ನುತ್ತಾರೆ? ಅವರು ಅವಕಾಡೋ (ಜಗತ್ತಿನ ಅತ್ಯಂತ ಆರೋಗ್ಯಕಾರಿ ಹಣ್ಣು ಎಂದು ಪರಿಗಣಿಸಿರುವ ಮೆಕ್ಸಿಕೋ ಮೂಲದ ಹಣ್ಣು) ತಿನ್ನುತ್ತಾರೆಯೇ ಎಂದು ಪ್ರಶ್ನಿಸಿದ್ದರು.
ಮಹಾರಾಷ್ಟ್ರ, ಗುಜರಾತ್ ಅಲ್ಲದೆಯೇ ಉತ್ತರ ಪ್ರದೇಶದ ತಮ್ಮ ಕ್ಷೇತ್ರದಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದ್ದು, ಕೆ.ಜಿಗೆ 25 ರೂ. ದರದಲ್ಲಿ ಒಂದು ಟ್ರಕ್ ಲೋಡ್ ಈರುಳ್ಳಿ ಒದಗಿಸಲು ಸಿದ್ಧರಿರುವುದಾಗಿ ವಿಪಕ್ಷಗಳಿಗೆ ಸವಾಲು ಹಾಕಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications