• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್‌ನ ದೊಡ್ಡ ಹುದ್ದೆ ಮೇಲೆ ಕಣ್ಣಿಟ್ಟ ಕೆ.ಎಚ್.ಮುನಿಯಪ್ಪ

|

ನವದೆಹಲಿ, ಡಿಸೆಂಬರ್ 16: ಕಾಂಗ್ರೆಸ್‌ ನ ದೊಡ್ಡ ಹುದ್ದೆ ಮೇಲೆಯೇ ಕಣ್ಣಿಟ್ಟಿದ್ದಾರೆ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ಸಿದ್ದರಾಮಯ್ಯ ಸೇರಿದಂತೆ ಸ್ವಪಕ್ಷದವರ ವಿರುದ್ಧವೇ ಗುಟುರು ಹಾಕಿ, ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಕೆ.ಎಚ್.ಮುನಿಯಪ್ಪ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೇ ಕಣ್ಣಿಟ್ಟಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ 'ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ' ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಕೊನೆಗೂ ಹೆಸರು ಅಂತಿಮ: ಸದ್ಯದಲ್ಲೇ ಅಧಿಕೃತ ಘೋಷಣೆ?

'ಪಕ್ಷ ಈ ಹಿಂದೆಯೂ ಸಾಕಷ್ಟು ಜವಾಬ್ದಾರಿಗಳನ್ನು ನೀಡಿದೆ. ಅದನ್ನು ನಿಭಾಯಿಸಿದ್ದೇನೆ, ಈಗಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಅದನ್ನು ನಿಭಾಯಿಸುತ್ತೇನೆ' ಎಂದಿದ್ದಾರೆ.

ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಿರಾ? ಎಂಬ ಸುದ್ದಿಗಾರರ ಪ್ರಶ್ನೆಗೆ, 'ನಾನು ಭೇಟಿ ಮಾಡಿಲ್ಲ, ಭೇಟಿ ಮಾಡುವುದಿಲ್ಲ, ಅಧ್ಯಕ್ಷ ಸ್ಥಾನಕ್ಕೆ ಲಾಭಿ ಮಾಡುವುದಿಲ್ಲ, ರಾಹುಲ್, ಸೋನಿಯಾ ಗಾಂಧಿ ಅವರು ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ' ಎಂದರು.

'ದೇಶವನ್ನು ದಾರಿ ತಪ್ಪಿಸಿದ್ದೇ ಮೋದಿ ಸರ್ಕಾರದ ಆರು ವರ್ಷದ ಸಾಧನೆ'

ಕಳೆದ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆ.ಎಚ್.ಮುನಿಯಪ್ಪ ಭಾರಿ ಅಂತರದಿಂದ ಸೋಲು ಕಂಡಿದ್ದರು. ಸತತ ಏಳು ಬಾರಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದ ಮುನಿಯಪ್ಪ ಈ ಬಾರಿ ಮುಗ್ಗರಿಸಿದರು. ಹಾಗಾಗಿ ಈಗ ರಾಜಕೀಯ ಅಸ್ಥಿತ್ವಕ್ಕಾಗಿ ಕೆಪಿಸಿಸಿ ಸ್ಥಾನ-ಮಾನಕ್ಕಾಗಿ ಯತ್ನಿಸುತ್ತಿದ್ದಾರೆ.

English summary
Former central minister KH Muniyappa said 'i am also KPCC president post aspirant'. He also said, i will bond to the party high command's decisions'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X