ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ರೆಡಿ: ಡಿಕೆಶಿ
ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಇಂಧನ ಸಚಿವ ಡಿ ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಾವು ಸಿದ್ಧ ಎಂದಿದ್ದಾರೆ.
ನವದೆಹಲಿ, ಮೇ 03: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರೆಡಿ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಅಧ್ಯಕ್ಷ ಸ್ಥಾನ ಅರ್ಜಿ ಹಾಕಿ ಪಡೆಯೋ ಅಂಥದ್ದಲ್ಲ, ಪಕ್ಷದ ಹಿರಿಯರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿಯುತ ಸ್ಥಾನ ನೀಡಿದರೆ ನಾನು ಆ ಸ್ಥಾನವನ್ನು ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.[ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ನಡೆಸಿಲ್ಲ: ಡಿಕೆ ಶಿವಕುಮಾರ್]

ಈಗಾಗಲೇ ಪಕ್ಷದಲ್ಲಿ ಹಲವು ಜವಾಬ್ದಾರಿಯುತ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆಗೂ ನಾನು ಸಿದ್ಧ ಎಂದವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮೇಲೆ ಅಸಮಾಧಾನವಿದೆ ಎಂಬುದೆಲ್ಲ ಗಾಳಿಸುದ್ದಿ. ನಾವು ಅನ್ಯೋನ್ಯವಾಗಿಯೇ ಇದ್ದೇವೆ ಎಂದು ಇದೇ ಸಂದರ್ಭದಲ್ಲಿ ಡಿಕೆಶಿ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications