ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್
ನವದೆಹಲಿ, ಅಕ್ಟೋಬರ್ 1: ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯ ಸಿಬಿಐ ಕೋರ್ಟ್ ಎದುರು ಸುದ್ದಿಗಾರರ ಬಳಿ ಮಾತನಾಡಿದ ಅವರು, ಆದಷ್ಟು ಬೇಗ ಹೊರಗೆ ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿಡುತ್ತೇನೆ, ಬೇಗ ನನಗೆ ಆರೋಪದಿಂದ ಮುಕ್ತಿ ಸಿಗಲಿದೆ ಎಂದರು.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಬಂಧನದ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ. ವಕೀಲರ ಭೇಟಿಗೆ ಮಧ್ಯಾಹ್ನ 3ರಿಂದ 5ರವರೆಗೆ ಕಾಲಾವಕಾಶ ನಿಗದಿ ಮಾಡಲಾಗಿದೆ.

ಬಂಡೆ ಬಗ್ಗಲ್ಲ, ಬಂಡೆ ಜಗ್ಗಲ್ಲ, ಬಿಸಿಲು -ಮಳೆ ಬಂದರೂ ಏನೂ ಆಗುವುದಿಲ್ಲ, ಎಲ್ಲವನ್ನೂ ಆತ್ಮಸ್ಥೈರ್ಯದಿಂದ ಎದುರಿಸುತ್ತೇನೆ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿಕೆ ಶಿವಕುಮಾರ್ ಅವರನ್ನು ಸೆ.3ರಂದು ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು. 14 ದಿನಗಳ ವಿಚಾರಣೆಯ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.












Click it and Unblock the Notifications