• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸತ್ಯ, ಅನ್ಯಾಯಕ್ಕೆ ಎಂದಿಗೂ ತಲೆ ಬಾಗಲ್ಲ ಎಂದ ರಾಹುಲ್ ಗಾಂಧಿ

|

ನವದೆಹಲಿ, ಅಕ್ಟೋಬರ್.02: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಉಲ್ಲೇಖಿಸಿರುವ ಸಂಸದ ರಾಹುಲ್ ಗಾಂಧಿ, ನಾವು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ತಲೆ ಬಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಗುರುವಾರ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 19 ವರ್ಷದ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ತಡೆದಿದ್ದರು. ಅಲ್ಲದೇ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಅತ್ಯಾಚಾರ ಎಂದರೇನು: ಯುಪಿ ಎಡಿಜಿಪಿಗೆ ಕಾಂಗ್ರೆಸ್ ನಾಯಕಿ ಕಾನೂನಿನ ಪಾಠ

ಮಹಾತ್ಮಾ ಗಾಂಧೀಜಿ 151ನೇ ಜಯಂತಿಯ ಹೃತ್ಪೂರ್ವಕ ಶುಭಾಷಯ ಕೋರಿದ ವಯನಾಡು ಸಂಸದ ರಾಹುಲ್ ಗಾಂಧಿ ಅವರು, ಉತ್ತರ ಪ್ರದೇಶ ಸರ್ಕಾರ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಆಡಳಿತ ವೈಖರಿ ವಿರುದ್ಧ ಕಿಡಿ ಕಾರಿದ್ದಾರೆ.

ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ತಲೆ ಬಾಗಲ್ಲ

ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ತಲೆ ಬಾಗಲ್ಲ

"ನಾನು ಜಗತ್ತಿನಲ್ಲಿ ಯಾರಿಗೂ ಹೆದರುವುದಿಲ್ಲ. ನಾನು ಯಾವುದೇ ರೀತಿಯ ಅನ್ಯಾಯಕ್ಕೆ ತಲೆಬಾಗುವುದಿಲ್ಲ. ಸತ್ಯದ ಶಕ್ತಿಯಿಂದ ನಾನು ಸುಳ್ಳನ್ನು ಸೋಲಿಸುತ್ತೇನೆ, ಮತ್ತು ಅಸತ್ಯದ ವಿರುದ್ಧ ಹೋರಾಡುವಾಗ ಎಲ್ಲಾ ಹೋರಾಟಗಳನ್ನು ಎದುರಿಸುತ್ತೇನೆ" ಎಂದು ಸಂಸದ ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಮತ್ತು ರಾಹುಲ್ ಗಾಂಧಿ ನಡುವೆ ವಾಗ್ವಾದ

ಪೊಲೀಸ್ ಮತ್ತು ರಾಹುಲ್ ಗಾಂಧಿ ನಡುವೆ ವಾಗ್ವಾದ

ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿರುವ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಬಂಧಿಸಲ್ಪಟ್ಟ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. "ಏಕೆ ನೀವು ನನ್ನನ್ನು ಬಂಧಿಸಿದ್ದೀರಿ. ನನ್ನನ್ನು ಬಂಧಿಸುವುದಕ್ಕೆ ಕಾರಣವಾದರೂ ಏನು. ಯಾವ ಕಾನೂನನ್ನು ನಾನು ಉಲ್ಲಂಘನೆ ಮಾಡಿದ್ದೇನೆ" ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು.

ಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನ

ಪ್ರಿಯಾಂಕಾ, ರಾಹುಲ್ ಗಾಂಧಿ ವಿರುದ್ಧ ಕೇಸ್

ಪ್ರಿಯಾಂಕಾ, ರಾಹುಲ್ ಗಾಂಧಿ ವಿರುದ್ಧ ಕೇಸ್

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ 144 ಸೆಕ್ಷನ್ ಅಡಿ ನಿಷೇಧಾಜ್ಞೆೆ ಜಾರಿಗೊಳಿಸಲಾಗಿತ್ತು. ಇದರ ಮಧ್ಯೆ ಕಾನೂನು ಉಲ್ಲಂಘನೆ ಆರೋಪದಡಿ ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿತ್ತು. ಗುರುವಾರ ಸಂಜೆ ಇಬ್ಬರು ನಾಯಕರೂ ಸೇರಿದಂತೆ 150 ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಉತ್ತರ ಪ್ರದೇಶ ಪೊಲೀಸರ ವರ್ತನೆಗೆ ಶರದ್ ಪವಾರ್ ಖಂಡನೆ

ಉತ್ತರ ಪ್ರದೇಶ ಪೊಲೀಸರ ವರ್ತನೆಗೆ ಶರದ್ ಪವಾರ್ ಖಂಡನೆ

ಇನ್ನು, ರಾಹುಲ್ ಗಾಂಧಿ ವಿಚಾರದಲ್ಲಿ ಉತ್ತರ ಪ್ರದೇಶ ಪೊಲೀಸರು ನಡೆದುಕೊಂಡ ರೀತಿಯ ವಿರುದ್ಧ ಹಲವು ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. "ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಯುಪಿ ಪೊಲೀಸರ ಅಜಾಗರೂಕ ವರ್ತನೆ ಅತ್ಯಂತ ಖಂಡನೀಯ. ಕಾನೂನನ್ನು ಎತ್ತಿಹಿಡಿಯಬೇಕಾದವರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಈ ರೀತಿ ಹಾಳು ಮಾಡುವುದು ಖಂಡನೀಯ" ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಟ್ವೀಟ್ ಮಾಡಿದ್ದರು.

  Robin Uthappa ಚೆಂಡಿಗೆ ಉಗುಳು ಹಚ್ಚಿದ ಚಿತ್ರ ವೈರಲ್ | Oneindia Kannada
  ಉತ್ತರ ಪ್ರದೇಶ ಪೊಲೀಸರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ

  ಉತ್ತರ ಪ್ರದೇಶ ಪೊಲೀಸರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ

  ಸಂಸದ ರಾಹುಲ್ ಗಾಂಧಿ ಮೇಲೆ ಪೊಲೀಸರು ತೋರಿದ ದೌರ್ಜನ್ಯಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡನೆ ವ್ಯಕ್ತಪಡಿಸಿದ್ದರು. "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸದ ರಾಹುಲ್ ಗಾಂಧಿಯವರು ಹತ್ರಾಸ್ ಗೆ ಭೇಟಿ ನೀಡುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಸಾಂವಿಧಾನಿಕ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಅದನ್ನು ತಡೆಯಲು ಯತ್ನಿಸಿದ ಪೊಲೀಸರ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಇಂಥ ವರ್ತನೆಗೆ ಅವಕಾಶ ಇರುವುದಿಲ್ಲ. ರಾಹುಲ್ ಗಾಂಧಿ ಮೇಲೆ ಪೊಲೀಸರು ಹಲ್ಲೆಗೆ ಯತ್ನಿಸಿರುವುದು ಖಂಡನೀಯ" ಎಂದು ಪಿಣರಾಯಿ ವಿಜಯನ್ ಕಿಡಿ ಕಾರಿದ್ದರು.

  English summary
  I Won't Bow Down To Any Sort Of Injustice: Rahul Gandhi Tweet After Uttar Pradesh Protest.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X