• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ಯಡಿಯೂರಪ್ಪ ಮಹತ್ವದ ಹೇಳಿಕೆ

|

ಬೆಂಗಳೂರು, ಸೆ. 19: ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಒಪ್ಪಿಗೆ ಪಡೆಯಲು ತೆರಳಿದ್ದ ಸಿಎಂ ಯಡಿಯೂರಪ್ಪ ಅವರಿಗೆ ನಿರಾಸೆಯಾಗಿದೆ. ಅವರು ಮುಖ್ಯಮಂತ್ರಿಯಾಗಲು ಮೈತ್ರಿ ಸರ್ಕಾರದಲ್ಲಿ ತ್ಯಾಗ ಮಾಡಿದ್ದವರಿಗೆ ಕೊಟ್ಟ ಮಾತಿನಂತೆ ಮಂತ್ರಿ ಮಾಡಲು ಯಡಿಯೂರಪ್ಪ ಅವರು ತೀವ್ರ ಪ್ರಯತ್ನ ನಡೆಸಿದ್ದಾರೆ. ಹೀಗಾಗಿಯೇ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್ ಒಪ್ಪಿಗೆ ಪಡೆಯಲು ಬಿಎಸ್‌ವೈ ತೀವ್ರ ಪ್ರಯತ್ನ ನಡೆಸಿದ್ದಾರೆ.

ಸಂಪುಟ ವಿಸ್ತರಣೆ ಹೈಕಮಾಂಡ್ ಭೇಟಿಯ ಕುರಿತು ದೆಹಲಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನನ್ನ ಇಚ್ಛೆಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ದೆಹಲಿ ಕರ್ನಾಟಕ ಭವನ-1 ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಜೆ.ಪಿ. ನಡ್ಡಾ ಅವರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ವರಿಷ್ಠರ ಅನುಮತಿ ಮತ್ತು ಸಹಮತಿ ಸಿಕ್ಕ ಕೂಡಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.

ದೆಹಲಿ ಭೇಟಿ ಅತ್ಯಂತ ಯಶಸ್ವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಕೇಂದ್ರದ ಒಪ್ಪಿಗೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ.

ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ. ಎಲ್ಲರೂ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

English summary
Talking about the High Command's meet in Delhi, Chief Minister Yeddyurappa has said that I would like to do the cabinet expansion before the session starts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X