ಲಾಕ್ ಡೌನ್ ಮುಗಿದ ಬಳಿಕ ನಡೆಯಲಿದೆ ICSE, ISC ಪರೀಕ್ಷೆ
ಕೋವಿಡ್-19 ತಡೆಗಟ್ಟಲು ಘೋಷಿಸಲಾಗಿರುವ ಲಾಕ್ ಡೌನ್ ಮುಗಿದ ಬಳಿಕ ಬಾಕಿ ಉಳಿದಿರುವ ಐ.ಎಸ್.ಸಿ ಮತ್ತು ಐ.ಸಿ.ಎಸ್.ಇ ಪರೀಕ್ಷೆಗಳನ್ನು ಸಿ.ಐ.ಎಸ್.ಸಿ.ಇ (ಕೌನ್ಸಿಲ್ ಫಾರ್ ದಿ ಇಂಡಿಯಾ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್) ನಡೆಸಲಿದೆ.
ಶನಿವಾರ ಮತ್ತು ಭಾನುವಾರವೂ ಸೇರಿದಂತೆ 6-8 ದಿನಗಳ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಿ.ಐ.ಎಸ್.ಸಿ.ಇ ತಿಳಿಸಿದೆ.
ಲಾಕ್ ಡೌನ್ ನಿಂದಾಗಿ ಇತರೆ ಪಬ್ಲಿಕ್ ಪರೀಕ್ಷೆಗಳಂತೆ ಐ.ಎಸ್.ಸಿ ಮತ್ತು ಐ.ಸಿ.ಎಸ್.ಇ ಕೂಡ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು. 12ನೇ ತರಗತಿಯ ವಿದ್ಯಾರ್ಥಿಗಳು ಐ.ಎಸ್.ಸಿ ಮಂಡಳಿಯ ವ್ಯಾಪ್ತಿಗೆ ಬರುವ ಬಾಕಿ ಉಳಿದ ಎಂಟು ವಿಷಯಗಳ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾದರೆ, 10ನೇ ತರಗತಿಯ ವಿದ್ಯಾರ್ಥಿಗಳು ಆರು ಐ.ಸಿ.ಎಸ್.ಇ ಮಂಡಳಿ ವಿಷಯಗಳ ಪರೀಕ್ಷೆಗೆ ಕುಳಿತುಕೊಳ್ಳಬೇಕಾಗುತ್ತದೆ.

* ಬಾಕಿ ಉಳಿದಿರುವ ಪರೀಕ್ಷೆಗಳು ಯಾವುವು?
- ಐ.ಸಿ.ಎಸ್.ಇ : ಜಿಯೋಗ್ರಫಿ ಎಚ್.ಸಿ.ಜಿ ಪೇಪರ್ 2, ಬಯಾಲಜಿ - ಸೈನ್ಸ್ ಪೇಪರ್ 3, ಎಕೊನಾಮಿಕ್ಸ್ ಗ್ರೂಪ್ಸ್ 3 ಎಲೆಕ್ಟಿವ್, ಹಿಂದಿಯಾ ಅಂಡ್ ಆರ್ಟ್ ಪೇಪರ್ 4
- ಐ.ಎಸ್.ಸಿ : ಬಯಾಲಜಿ ಪೇಪರ್ 1, ಬಿಸಿನೆಸ್ ಸ್ಟಡೀಸ್, ಜಿಯೋಗ್ರಫಿ, ಸೋಷಿಯಾಲಜಿ, ಸೈಕಾಲಜಿ, ಹೋಮ್ ಸೈನ್ಸ್ ಪೇಪರ್ 1, ಎಲೆಕ್ಟಿವ್ ಇಂಗ್ಲೀಷ್, ಆರ್ಟ್ ಪೇಪರ್ 5
ದೇಶವ್ಯಾಪಿ ಲಾಕ್ ಡೌನ್ ಘೋಷಣೆ ಮಾಡಿದ್ಮೇಲೆ, ಈ ಪರೀಕ್ಷೆಗಳನ್ನು ನಡೆಸಲಾಗಲಿಲ್ಲ.
* ಪರೀಕ್ಷಾ ವೇಳಾಪಟ್ಟಿ
ಲಾಕ್ ಡೌನ್ ಸಂಪೂರ್ಣವಾಗಿ ತೆರವುಗೊಂಡ ಬಳಿಕ ಬಾಕಿ ಉಳಿದಿರುವ ಪರೀಕ್ಷೆಗಳ ವೇಳಾಪಟ್ಟಿ ನೀಡಲಾಗುವುದು ಎಂದು ಸಿ.ಐ.ಎಸ್.ಸಿ.ಇ ಹೇಳಿದೆ.
ಪರೀಕ್ಷೆಗಳಿಗೂ 8 ದಿನಗಳ ಮುನ್ನ ವೇಳಾಪಟ್ಟಿ ಬಹಿರಂಗವಾಗಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪರೀಕ್ಷೆ ಮುಗಿದ ಬಳಿಕ 6-8 ವಾರಗಳ ನಂತರ ಫಲಿತಾಂಶ ಪ್ರಕಟವಾಗಲಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications