ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Heatwave in India : ದೇಶದಲ್ಲಿ ತಾಪಮಾನ ಹೆಚ್ಚಳ, 5 ರಾಜ್ಯಗಳಿಗೆ ಅರೆಂಜ್ ಅಲರ್ಟ್‌ ಘೋಷಿಸಿದ ಐಎಂಡಿ

|
Google Oneindia Kannada News

ನವದೆಹಲಿ, ಏಪ್ರಿಲ್ 28 : ದೇಶದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ಹವಮಾನ ಇಲಾಖೆ ದೇಶದ ಐದು ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಬುಧವಾರ ರಾಜಸ್ಥಾನ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ 45 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಈ ಐದು ರಾಜ್ಯಗಳಿಗೆ ಹವಾಮಾನ ಇಲಾಖೆ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಒಣ ಹವೆ ಹೆಚ್ಚಾಗಿರುವ ಹಿನ್ನಲೆ ಯೆಲ್ಲೂ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಏಪ್ರಿಲ್ 29 ರಂದು ಉತ್ತರ ಭಾರತದಲ್ಲಿ ಧೂಳಿನ ಚಂಡಮಾರುತ ಏಳುವ ಸಾಧ್ಯತೆಯಿದೆ. ಇದರಿಂದ ಮೇ 1 ಮತ್ತು 2ರಂದು ತಾಪಮಾನವು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರ ಒಂದೇ ದಿನದಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ, ಚತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ 43 ರಿಂದ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಟ ತಾಪಮಾನ ದಾಖಲಾಗಿದೆ.

IMD Issues Orange Alert For Severe Heatwave In 5 States

ಹವಾಮಾನ ಇಲಾಖೆ ಇಂದು ಮಧ್ಯಾಹ್ನ ದೈನಂದಿನ ಬುಲೆಟಿನ್ ಬಿಡುಗಡೆ ಮಾಡಿದ್ದು, ಮುಂದಿನ ಐದು ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಬಿಸಿ ಗಾಳಿ ಇರಲಿದೆ. ಪೂರ್ವ ಭಾರತದಲ್ಲಿ ಮೂರು ದಿನಗಳ ಕಾಲ ಬಿಸಿ ಗಾಳಿ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲಿ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

IMD Issues Orange Alert For Severe Heatwave In 5 States

ಮೇ 1 ಮತ್ತು 2ನೇ ತಾರೀಖಿನ ಅವಧಿಯಲ್ಲಿ ತೀವ್ರ ತರವಾದ ಬಿಸಿಗಾಳಿ ಹೆಚ್ಚಾಗಲಿದ್ದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಬಿಹಾರ, ಜಾರ್ಖಂಡ್, ಒಡಿಶಾ, ಚತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮುಂದಿನ ಮೂರ್ನಾಲ್ಕು ದಿನ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
Amid soaring temperatures, the India Meteorological Department issued a heatwave alert for five states - Rajasthan, Delhi, Haryana, UP and Odisha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X