ಪಾಕಿಸ್ತಾನ, ನೇಪಾಳ ಬಿಟ್ಟರೆ ಭಾರತವೇ ಬಡರಾಷ್ಟ್ರ: ಐಎಂಎಫ್
ನವದೆಹಲಿ, ಅಕ್ಟೋಬರ್.14: ಭಾರತದಲ್ಲಿ 2020ನೇ ಸಾಲಿನ ತಲಾ ಜಿಡಿಪಿ ದರದಲ್ಲಿ ಭಾರೀ ಕುಸಿತ ಕಂಡು ಬರಲಿದೆ. ಬಾಂಗ್ಲಾದೇಶ ಕೂಡಾ ಭಾರತವನ್ನು ಹಿಂದಿಕ್ಕಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಪ್ರಸ್ತಾಪವನ್ನು ಇಟ್ಟಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಗೊಂದಲವನ್ನು ಹುಟ್ಟು ಹಾಕಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಐಎಂಎಫ್ ಪ್ರಸ್ತಾಪವನ್ನೇ ಉಲ್ಲೇಖಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
"ದ್ವೇಷಪೂರಿತ ಸಾಂಸ್ಕೃತಿಕ ರಾಷ್ಟ್ರೀಯತೆಯೇ ಬಿಜೆಪಿಯ ಆರು ವರ್ಷಗಳ ಘನ ಸಾಧನೆಯಾಗಿದ್ದು, ಭಾರತವನ್ನೇ ಹಿಂದಿಕ್ಕಲು ಬಾಂಗ್ಲಾದೇಶ ಸಜ್ಜಾಗುತ್ತಿದೆ" ಎಂದು ಸಂಸದ ರಾಹುಲ್ ಗಾಂಧಿ ಟ್ವಿಟರ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಭಾರತದ ತಲಾ ಜಿಡಿಪಿ ಬಗ್ಗೆ ಐಎಂಎಫ್ ಹೇಳಿದ್ದೇನು?
ಜಾಗತಿಕ ಮಟ್ಟದಲ್ಲಿ ಭಾರತದ ತಲಾ ಜಿಡಿಪಿ ಪ್ರಮಾಣವು ತೀರಾ ಕೆಳಮಟ್ಟದಲ್ಲಿದೆ. ಒಂದು ಹಂತದಲ್ಲಿ ಬಾಂಗ್ಲಾದೇಶ ಕೂಡಾ ಭಾರತವನ್ನು ಹಿಂದಿಕ್ಕುವಂತಾ ಪರಿಸ್ಥಿತಿಯಿದೆ. ಬಹುಶಃ ಮುಂದಿನ ಆರ್ಥಿಕ ವರ್ಷದಲ್ಲಿ ಭಾರತದ ತಲಾ ಜಿಡಿಪಿಯಲ್ಲಿ ಬೆಳವಣಿಗೆ ಕಂಡು ಬರಬಹುದು ಎಂದು ಐಎಂಎಫ್ ತಿಳಿಸಿದೆ.
ಮಂಗಳವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವಿಶ್ವ ಆರ್ಥಿಕ ಔಟ್‌ಲುಕ್ ವರದಿಯನ್ನು ಬಿಡುಗಡೆಗೊಳಿಸಿದೆ. ಅದರ ಪ್ರಕಾರ 2021ರ ಮಾರ್ಚ್.31ಕ್ಕೆ ಆರ್ಥಿಕ ವರ್ಷದ ಅಂತ್ಯದಲ್ಲಿ ಭಾರತದ ತಲಾ ಜಿಡಿಪಿ ಶೇಕಡಾ 10.5 ರಷ್ಟು ಕುಸಿಯಲಿದ್ದು 1,877 ಡಾಲರ್‌ಗೆ ತಲುಪಲಿದೆ. ಇದರಿಂದ ಅತಿಕಡಿಮೆ ತಲಾ ಜಿಡಿಪಿಯನ್ನು ಹೊಂದಿರುವ ದಕ್ಷಿಣ ಏಷ್ಯಾದ ಮೂರನೇ ರಾಷ್ಟ್ರವಾಗಿ ಭಾರತವು ಗುರುತಿಸಿಕೊಳ್ಳಲಿದೆ. ಅತಿ ಕಡಿಮೆ ತಲಾ ಜಿಡಿಪಿ ಹೊಂದಿರುವ ಮೊದಲ ರಾಷ್ಟ್ರ ಪಾಕಿಸ್ತಾನವಾಗಿದ್ದು, ನೇಪಾಳ ಎರಡನೇ ಸ್ಥಾನದಲ್ಲಿದೆ.
ದಕ್ಷಿಣ ಏಷ್ಯಾದಲ್ಲೇ ಇರುವ ಬಾಂಗ್ಲಾದೇಶ, ಭೂತಾನ್, ಶ್ರೀಲಂಕಾ, ಮಾಲ್ಡೀವ್ಸ್ ನಂತಾ ರಾಷ್ಟ್ರಗಳಲ್ಲಿಯೇ ತಲಾ ಜಿಡಿಪಿ ಭಾರತಕ್ಕಿಂತ ಉತ್ತಮವಾಗಿದೆ. ಬಾಂಗ್ಲಾದೇಶದ ತಲಾ ಜಿಡಿಪಿಯು ಭಾರತಕ್ಕೆ ಹೋಲಿಸಿದರೆ ಶೇ.4ರಷ್ಟು ಏರಿಕೆಯಾಗಲಿದೆ ಎಂದು ಐಎಂಎಫ್ ತಿಳಿಸಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications