ದೆಹಲಿ: ಕಳೆದ 4 ದಿನಗಳಲ್ಲಿ ಕೊರೊನಾದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ

ನವದೆಹಲಿ, ಸೆಪ್ಟೆಂಬರ್ 04: ರಾಷ್ಟ್ರ ರಾಜಧಾನಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾದಿಂದಾಗಿ ಒಂದೇ ಒಂದು ಸಾವು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ 24 ಗಂಟೆಗಳಲ್ಲಿ 55 ಹೊಸ ಪ್ರಕರಣಗಳು ಪತ್ತೆಯಾಗಿವೆ, ದೆಹಲಿಯಲ್ಲಿ ಒಟ್ಟು 25,082 ಮಂದಿ ಮೃತಪಟ್ಟಿದ್ದಾರೆ. ಒಟ್ಟು 14,37,929 ಪ್ರಕರಣಗಳಿವೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ನಗರದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.0.08ರಷ್ಟಿದೆ. ಶುಕ್ರವಾರ 39 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಬುಧವಾರ 36 ಪ್ರಕರಣಗಳು ದಾಖಲಾಗಿದ್ದವು ಮಂಗಳವಾರ 28 ಪ್ರಕರಣಗಳು ಪತ್ತೆಯಾಗಿದ್ದವು.

In 24 Hours No Covid Death In Delhi For 4th Straight Day, 55 New Cases

ಒಟ್ಟು 80 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ, ಚೇತರಿಕೆ ಪ್ರಮಾಣ ಶೇ.98.23ರಷ್ಟಿದೆ. ನಗರದಲ್ಲಿ 70,303 ಮಂದಿಯನ್ನು ಪರೀಕ್ಷಿಸಲಾಗಿದೆ. ಇದುವರೆಗೆ 2,59,32,413 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,385 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,04,970 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 52,82,40,038 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+