ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇದೇ ಮೊದಲ ಬಾರಿ ಲಡಾಖ್ ಸ್ತಬ್ಧಚಿತ್ರ
ನವದೆಹಲಿ, ಜನವರಿ 24: ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಲಡಾಖ್ ಸ್ತಬ್ಧಚಿತ್ರವಿರಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಲಡಾಖ್‌ನ ಸ್ತಬ್ಧಚಿತ್ರ ಲೇಹ್ ಜಿಲ್ಲೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಒಳಗೊಂಡಿರಲಿದೆ. ಇದು ಈ ಪ್ರದೇಶದಲ್ಲಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದೆನಿಸಿದೆ.
ಈ ವರ್ಷದ ಗಣರಾಜ್ಯೋತ್ಸವದ ಮೆರವಣಿಗೆ ಹಿಂದಿನ ವರ್ಷಗಳಿಗಿಂತ ಬಹಳ ಭಿನ್ನವಾಗಿರುತ್ತದೆ ಏಕೆಂದರೆ ಇದು ಕೋವಿಡ್ ಸಾಂಕ್ರಾಮಿಕದ ಮಧ್ಯೆ ನಡೆಯಲಿದೆ. ಯೋಧರು ಮಾಸ್ಕ್ ಧರಿಸಿ ಕಾಣಿಸಿಕೊಳ್ಳುತ್ತಾರೆ.

ಈ ವರ್ಷ ಗಣರಾಜ್ಯೋತ್ಸವದ ಮೆರವಣಿಗೆಗೆ 25,000 ಪ್ರೇಕ್ಷಕರು ಮಾತ್ರ ಸಾಕ್ಷಿಯಾಗಲಿದ್ದಾರೆ. ಅಲ್ಲದೆ ಐದು ದಶಕಗಳಿಗಿಂತ ಹೆಚ್ಚು ಅವಧಿಯಲ್ಲಿ ಮುಖ್ಯ ಅತಿಥಿಯಿಲ್ಲದ ಮೊದಲ ಗಣರಾಜ್ಯೋತ್ಸವ ಮೆರವಣಿಗೆ ಇದಾಗಿದೆ. ಇದಕ್ಕೂ ಮೊದಲು 1952, 1953 ಮತ್ತು 1966 ರಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮುಖ್ಯ ಅತಿಥಿಗಳು ಭಾಗವಹಿಸಿರಲಿಲ್ಲ.
ಲೇಹ್ ಬಳಿಯ ಹ್ಯಾನ್ಲೆನಲ್ಲಿರುವ ಭಾರತೀಯ ಖಗೋಳ ವೀಕ್ಷಣಾಲಯವನ್ನು ಸಹ ಒಳಗೊಂಡಿದೆ. "ಲಡಾಖ್ ನ ಟ್ಯಾಬ್ಲೋ ಲೇಹ್ ಜಿಲ್ಲೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಹೊಂದಿರಲಿದೆ. ಇದು ಈ ಪ್ರದೇಶದಲ್ಲಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ" ಎಂದು ಸಿಂಗ್ ಹೇಳಿದರು.
ಕೇಂದ್ರ ಸರ್ಕಾರವು 2019 ರ ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಾಗಿಸಿದೆ. ಜನವರಿ 26 ರಂದು ನಡೆಯುವ ವಾರ್ಷಿಕ ಪೆರೇಡ್ ನಲ್ಲಿ ಭಾರತ ತನ್ನ ಮಿಲಿಟರಿ ಸಾಮರ್ಥ್ಯವನ್ನು ಪ್ರದರ್ಶಿಸಲು ಸಜ್ಜಾಗಿದೆ.
ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ಟ್ಯಾಬ್ಲೋ ಹಾಗೂ ರಾಫೇಲ್ ಯುದ್ಧ ವಿಮಾನಗಳು 2021 ರ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಗಳಾಗಿವೆ. ಉತ್ತರ ಪ್ರದೇಶದ ಟ್ಯಾಬ್ಲೋದಲ್ಲಿ ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಅಯೋಧ್ಯೆಯ ರಾಮ ಮಂದಿರದ ಪ್ರತಿಕೃತಿ ಇರುತ್ತದೆ. ಇದು ದೇವಾಲಯ ಪಟ್ಟಣಕ್ಕೆ ಸಂಬಂಧಿಸಿದ ಸಂಸ್ಕೃತಿ, ಸಂಪ್ರದಾಯ ಮತ್ತು ಕಲೆಗಳನ್ನು ಪ್ರದರ್ಶಿಸುತ್ತದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications