ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯ ಪ್ರಕರಣದ ಅಪರಾಧಿಗಳು ಜೈಲಿನಲ್ಲಿ ಸಂಪಾದಿಸಿದ್ದೆಷ್ಟು?

|
Google Oneindia Kannada News

ನವದೆಹಲಿ, ಜನವರಿ 15 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ದಿನಗಣನೆ ಆರಂಭವಾಗಿದೆ. ಜನವರಿ 22ರಂದು ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ವಿಧಿಸಲು ಸಿದ್ಧತೆಗಳು ನಡೆಯುತ್ತಿವೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಎಲ್ಲಾ ಅಪರಾಧಿಗಳು ಇದ್ದಾರೆ. ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾರೆ. ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ನಿರ್ಭಯ ಪ್ರಕರಣ; ಕ್ಷಮಾದಾನ ಅರ್ಜಿ ಸಲ್ಲಿಸಿದ ಅಪರಾಧಿ ಮುಕೇಶ್ನಿರ್ಭಯ ಪ್ರಕರಣ; ಕ್ಷಮಾದಾನ ಅರ್ಜಿ ಸಲ್ಲಿಸಿದ ಅಪರಾಧಿ ಮುಕೇಶ್

ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳಿದ್ದರು. ಒಬ್ಬ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ. ಇನ್ನೊಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಬಿಡುಗಡೆಗೊಂಡಿದ್ದಾನೆ. ನಾಲ್ವರು ಅಪರಾಧಿಗಳ ಆರೋಪ ಸಾಬೀತಾಗಿದ್ದು, ಗಲ್ಲು ಶಿಕ್ಷೆ ವಿಧಿಸಲಾಗಿದೆ.

ನಿರ್ಭಯಾ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ ಖಾತರಿನಿರ್ಭಯಾ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ ಖಾತರಿ

ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಪಟಿಯಾಲಾ ಹೌಸ್ ಕೋರ್ಟ್ ಎಲ್ಲಾ ಅಪರಾಧಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದೆ.

ನಿರ್ಭಯಾ ಅತ್ಯಾಚಾರ ಪ್ರಕರಣ: ತಿಹಾರ್ ಜೈಲಿನಲ್ಲಿ ನಾಲ್ಕು ಗೊಂಬೆಗೆ ಗಲ್ಲುಶಿಕ್ಷೆನಿರ್ಭಯಾ ಅತ್ಯಾಚಾರ ಪ್ರಕರಣ: ತಿಹಾರ್ ಜೈಲಿನಲ್ಲಿ ನಾಲ್ಕು ಗೊಂಬೆಗೆ ಗಲ್ಲುಶಿಕ್ಷೆ

ಜೈಲಿನಲ್ಲಿ 1 ಲಕ್ಷ ರೂ. ದುಡಿದರು

ಜೈಲಿನಲ್ಲಿ 1 ಲಕ್ಷ ರೂ. ದುಡಿದರು

ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ ದೆಹಲಿಯ ತಿಹಾರ್ ಜೈಲಿನಲ್ಲಿ 1,37,000 ರೂ. ಸಂಪಾದನೆ ಮಾಡಿದ್ದಾರೆ. ಜನವರಿ 22ರಂದು ನಾಲ್ವರಿಗೂ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಯಾರು ಎಷ್ಟು ದುಡಿದರು?

ಯಾರು ಎಷ್ಟು ದುಡಿದರು?

ಜೈಲು ವಾಸದ ಸಂದರ್ಭದಲ್ಲಿ ಕೆಲಸ ಮಾಡುವುದು ಕಡ್ಡಾಯ. ಆದರೆ, ಮುಕೇಶ್ ಸಿಂಗ್ ಕೂಲಿ ಕೆಲಸವನ್ನು ಮಾಡಿಲ್ಲ. ಅಕ್ಷಯ್ ಕುಮಾರ್ ಸಿಂಗ್ 69 ಸಾವಿರ, ಪವನ್ 29 ಸಾವಿರ ಮತ್ತು ವಿನಯ್ 39 ಸಾವಿರ ರೂ. ಹಣವನ್ನು ಸಂಪಾದನೆ ಮಾಡಿದ್ದಾರೆ.

ಪರೀಕ್ಷೆ ಕಟ್ಟಿದ್ದರು

ಪರೀಕ್ಷೆ ಕಟ್ಟಿದ್ದರು

2012ರಲ್ಲಿ ಎಲ್ಲರ ಬಂಧನವಾಗಿತ್ತು. 2016ರಲ್ಲಿ ಮುಕೇಶ್, ಪವನ್ ಮತ್ತು ಅಕ್ಷಯ್ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕಟ್ಟಿದ್ದರು. ಆದರೆ, ಪಾಸ್ ಆಗಲಿಲ್ಲ. ವಿನಯ್ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದರೂ ಅದನ್ನು ಪೂರ್ಣಗೊಳಿಸಲಿಲ್ಲ.

ಜೈಲಿನ ನಿಯಮ ಉಲ್ಲಂಘನೆ

ಜೈಲಿನ ನಿಯಮ ಉಲ್ಲಂಘನೆ

ನಾಲ್ವರು ಅಪರಾಧಿಗಳು ಜೈಲಿನ ನಿಯಮಗಳನ್ನು ಉಲ್ಲಂಘನೆ ಮಾಡಿ ಶಿಕ್ಷೆಗೆ ಗುರಿಯಾಗಿದ್ದರು. ವಿನಯ್ 11 ಬಾರಿ ಶಿಕ್ಷೆಗೆ ಗುರಿಯಾಗಿದ್ದ. ಮುಕೇಶ್ ಮತ್ತು ಪವನ್ ಮೂರು ಬಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು.

English summary
Convicts of Nirbhaya case Akshay Thakur Singh, Mukesh, Pawan Gupta and Vinay Sharma will be hanged at 7 am on January 22, 2020. How much they earn during the jail term.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X