ದೆಹಲಿಯ ಐಐಟಿ ಆವರಣದಲ್ಲಿ ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ

ನವದೆಹಲಿ, ಜುಲೈ 27: ದೆಹಲಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಆವರಣದೊಳಗೆ ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆಯಾಗಿದೆ.

ಲ್ಯಾಬ್ ಟೆಕ್ನೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಗುಲ್‌ಶನ್ ದಾಸ್ , ಪತ್ನಿ ಹಾಗೂ ತಾಯಿ ಮೂವರ ಮೃತದೇಹ ಪತ್ತೆಯಾಗಿದ್ದು ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ.

ಗುಲ್‌ಶನ್ ಸ್ನೇಹಿತರು ಅವರನ್ನು ಸಂಪರ್ಕಿಸಲು ಸಾಧ್ಯವಾಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೂವರ ಮೃತದೇಹ ಸಿಕ್ಕಿದೆ. ಗುಲ್‌ಶನ್ ದಾಸ್, ಪತ್ನಿ ಹಾಗೂ ತಾಯಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

In Delhi IIT Campus 3 of Same Family Found Dead

ಆದರೆ ಆ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಲಭ್ಯವಾಗಿಲ್ಲ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗುಲ್‌ಶನ್ ಹಾಗೂ ಸುನಿತಾ ಇದೇ ಫೆಬ್ರವರಿಯಲ್ಲಿ ಮದುವೆಯಾಗಿದ್ದರು. ಗುಲ್‌ಶನ್ ಮೂಲತಃ ಹರಿಯಾಣದವರಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+