ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಜಿಡಿಪಿ' ಏರಿಕೆ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳ: ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 1: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ.

ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯಲ್ಲಿ ಶೇ.20.1 ಬೆಳವಣಿಗೆ ಕಂಡ ಭಾರತಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯಲ್ಲಿ ಶೇ.20.1 ಬೆಳವಣಿಗೆ ಕಂಡ ಭಾರತ

ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ. 21ರಷ್ಟು ಜಿಡಿಪಿ ಏರಿಕೆಯಾಗಿದೆ ಎಂದು ಸರ್ಕಾರ ಹೇಳಿದೆ. ಜಿಡಿಪಿ ಏರಿಕೆಗೆ ರಾಹುಲ್ ಗಾಂಧಿ ಹೊಸ ಪರಿಕಲ್ಪನೆ ನೀಡಿದ್ದಾರೆ.

Increase In GDP Means Gas, Diesel And Petrol Price Hike Says Rahul Gandhi

ರಾಹುಲ್ ಗಾಂಧಿ ಪ್ರಕಾರ, "ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಎಂದು ಹೇಳಿದ್ದಾರೆ. "ಜಿಡಿಪಿ ಏರುತ್ತಿದೆ ಎಂದು ಮೋದಿ ಜೀ ಹೇಳುತ್ತಲೇ ಇದ್ದಾರೆ, ಜಿಡಿಪಿ ಮೇಲ್ಮುಖವಾಗಿದೆ ಎಂದು ಹಣಕಾಸು ಸಚಿವರು ಹೇಳುತ್ತಾರೆ. ಜಿಡಿಪಿ- ಇದರ ಅರ್ಥವೇನೆಂದು ನನಗೆ ಈಗ ಅರ್ಥವಾಯಿತು. ಇದರ ಅರ್ಥ 'ಗ್ಯಾಸ್- ಡೀಸೆಲ್- ಪೆಟ್ರೋಲ್' ಏರಿಕೆ. ಅವರಿಗೆ ಈ ಗೊಂದಲವಿದೆ,'' ಎಂದು ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

"2014ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರವನ್ನು ತೊರೆದಾಗ, ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಪ್ರತಿ ಸಿಲಿಂಡರ್‌ಗೆ 410 ರೂ. ಮಾತ್ರ ಆಗಿತ್ತು," ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

"ರೈತರು, ಸಂಬಳ ಪಡೆಯುವ ವರ್ಗ ಮತ್ತು ಕಾರ್ಮಿಕರಿಗೆ ನೋಟು ರದ್ದತಿ ಮಾಡಲಾಗುತ್ತಿದ್ದರೆ, ಇತ್ತ ಪ್ರಧಾನಿ ನರೇಂದ್ರ ಮೋದಿ ಕೆಲವು ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಣ ಗಳಿಸುವಂತೆ ಮಾಡುತ್ತಿದ್ದಾರೆ," ಎಂದು ರಾಹುಲ್ ಗಾಂಧಿ ಆರೋಪಿಸಿದರು.

"ಒಂದೆಡೆ ನೋಟು ರದ್ದತಿ ಮತ್ತು ಇನ್ನೊಂದೆಡೆ ಹಣ ಗಳಿಕೆ ಇದೆ. ಯಾರ ನೋಟು ರದ್ದತಿ ನಡೆಯುತ್ತಿದೆ ಎಂದರೆ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಅನೌಪಚಾರಿಕ ವಲಯ, MSMEಗಳು, ಗುತ್ತಿಗೆ ಕಾರ್ಮಿಕರು, ಸಂಬಳದ ವರ್ಗ ಮತ್ತು ಪ್ರಾಮಾಣಿಕ ಕೈಗಾರಿಕೋದ್ಯಮಿಗಳು. ಯಾರು ಹಣ ಗಳಿಕೆ ಮಾಡುತ್ತಿದ್ದಾರೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕೈದು ಸ್ನೇಹಿತರದ್ದು ಮಾತ್ರ," ಎಂದು ವ್ಯಂಗ್ಯವಾಗಿ ಟೀಕಿಸಿದರು.

ಮಂಗಳವಾರದಂದು ಟ್ವೀಟ್ ಮಾಡಿದ್ದ ರಾಹುಲ್, India against BJP loot ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ, "ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗಲು ಒತ್ತಾಯಿಸುವವನು ಸ್ವತಃ ಸ್ನೇಹಿತರ ನೆರಳಿನಲ್ಲಿ ಮಲಗುತ್ತಾನೆ. ಆದರೆ ದೇಶವು ಅನ್ಯಾಯದ ವಿರುದ್ಧ ಒಂದಾಗುತ್ತಿದೆ," ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆಯ ಸಲುವಾಗಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಕೇಂದ್ರ ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದು ಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದೆ.

ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿಗೆ ಈಗ ತೈಲ ಕಂಪನಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್‌ಗೆ 884.50 ರೂ. ಆಗಿದೆ. ಎರಡು ತಿಂಗಳಲ್ಲಿ ಇದು ಮೂರನೇ ಬಾರಿ ದರ ಹೆಚ್ಚಾಗಿದೆ.

ಜುಲೈ 1 ರಂದು ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿ ದರಗಳನ್ನು ಪ್ರತಿ ಸಿಲಿಂಡರ್‌ಗೆ 25.50 ರೂ. ಏರಿಕೆ ಮಾಡಲಾಗಿತ್ತು. ಸಬ್ಸಿಡಿ ಎಲ್‌ಪಿಜಿ ಬೆಲೆಯಲ್ಲಿ ಇತ್ತೀಚಿನ ಹೆಚ್ಚಳವು ಜನವರಿ 1 ರಿಂದ ಸಿಲಿಂಡರ್‌ಗೆ 190 ರೂ. ಏರಿಕೆಯಾಗಿದೆ.

English summary
Congress leader Rahul Gandhi expressed outrage against the hike in petrol, diesel and gas prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X