ಚೀನಾ ಗಡಿ ಸಂಘರ್ಷ:ಲಡಾಖ್‌ಗೆ ಭೇಟಿ ನೀಡಿ ಪರಿಶೀಲಿಸಲಿರುವ ರಾಜನಾಥ್ ಸಿಂಗ್
ನವದೆಹಲಿ, ಜುಲೈ 01: ಗಡಿ ಪ್ರದೇಶದಲ್ಲಿ ಚೀನಾವು ಹೆಚ್ಚು ಸೇನೆಯನ್ನು ಜಮಾವಣೆ ಮಾಡುತ್ತಿರುವುದರಿಂದ ಉಂಟಾಗಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಮಿಲಿಟರಿ ಸನ್ನದ್ಧತೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಲಡಾಖ್‌ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Recommended Video
Zameer Ahmed Khan : ವಿವಾದಕ್ಕೆ ಕಾರಣವಾಯ್ತು ಶಾಸಕ ಜಮೀರ್ ಅಹಮ್ಮದ್ ಖಾನ್ 'ಪಾದಪೂಜೆ'! | Oneindia Kannada
ಭೇಟಿಯ ಸಮಯದಲ್ಲಿ ರಾಜನಾಥ್ ಸಿಂಗ್‌ಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಸಾಥ್ ನೀಡಲಿದ್ದು ಲೇಹ್‌ಗೆ ಭೇಟಿ ನೀಡಲಿದ್ದಾರೆ. ಜೊತೆಗೆ ಸಿಂಗ್, ಹಿರಿಯ ಮಿಲಿಟರಿ ನಾಯಕರೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಭಾರತೀಯ ಮತ್ತು ಚೀನೀ ಸೈನ್ಯಗಳು ಕಳೆದ ಏಳು ವಾರಗಳಿಂದ ಪೂರ್ವ ಲಡಾಖ್‌ನ ಅನೇಕ ಸ್ಥಳಗಳಲ್ಲಿ ನಿಲುಗಡೆಯಾಗಿವೆ. ಗಾಲ್ವಾನ್ ಕಣಿವೆಯ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರ ಸ ಸಾವಿನ ನಂತರ ಗಡಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.












Click it and Unblock the Notifications