ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

4.2 ಲಕ್ಷ ಕೋಟಿ ವೆಚ್ಚದಲ್ಲಿ 100 ವಿಮಾನ ನಿಲ್ದಾಣ ಕಟ್ಟಲು ಕೇಂದ್ರ ಸರ್ಕಾರ ಯೋಜನೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 04: ಭಾರತದ ವಿಮಾನಯಾನ ವಿಭಾಗ ವೇಗವಾಗಿ ಮುಂದುವರೆಯುತ್ತಿದ್ದ ಮುಂದಿನ 10-15 ವರ್ಷದಲ್ಲಿ ದೇಶದಾದ್ಯಂತ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ ವಿಮಾನಯಾನ ವಿಭಾಗವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ವಲಯವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

 India to construct 100 airports in 10-15 years

60 ಶತಕೋಟಿ ಡಾಲರ್ (4.2 ಲಕ್ಷ ಕೋಟಿ) ವೆಚ್ಚದಲ್ಲಿ ದೇಶದ ಹಲವು ನಗರಗಳಲ್ಲಿ 100 ವಿಮಾನ ನಿಲ್ದಾಣಗಳನ್ನು ಇನ್ನು 10-15 ವರ್ಷದಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ಅವರು ಹೇಳಿದರು.

ವಿಜಯ್ ಮಲ್ಯ ರೀತಿ ನನ್ನ ಸಾಲವನ್ನೂ ಮನ್ನಾ ಮಾಡಿ: ರೈತ ಪತ್ರವಿಜಯ್ ಮಲ್ಯ ರೀತಿ ನನ್ನ ಸಾಲವನ್ನೂ ಮನ್ನಾ ಮಾಡಿ: ರೈತ ಪತ್ರ

ಕಳೆದ 50 ತಿಂಗಳಲ್ಲಿ ಭಾರತ ವಿಮಾನ ಯಾನದ ಪ್ರಗತಿ ಎರಡಂಕಿಯನ್ನು ದಾಟಿ ವೇಗವಾಗಿ ಬೆಳೆಯುತ್ತಿದೆ. ಹಾಗಾಗಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಕೇಂದ್ರವು ವಿಮಾನ ನಿಲ್ದಾಣಗಳನ್ನು ನಿರ್ಮಿಸಲಿದೆ ಎಂದು ಹೇಳಿದರು.

ಆಟೋ ಪ್ರಯಾಣಕ್ಕಿಂತ ಕಡಿಮೆ ದರದಲ್ಲಿ ವಿಮಾನ ಪ್ರಯಾಣ!ಆಟೋ ಪ್ರಯಾಣಕ್ಕಿಂತ ಕಡಿಮೆ ದರದಲ್ಲಿ ವಿಮಾನ ಪ್ರಯಾಣ!

ಅಂತರರಾಷ್ಟ್ರೀಯ ವಾಯು ಸಾರಿಗೆ ಸಂಸ್ಥೆಯ ವರದಿಯ ಪ್ರಕಾರ ಭಾರತವು ಇನ್ನು 10 ವರ್ಷಗಳಲ್ಲಿ ಜರ್ಮನಿ, ಜಪಾನ್, ಸ್ಪೇನ್, ಬ್ರಿಟನ್‌ ದೇಶಗಳನ್ನು ಹಿಂದಿಕ್ಕಿ ಅತಿ ಹೆಚ್ಚು ವಿಮಾನ ಯಾನ ಮಾಡುವ ಮೂರನೇ ರಾಷ್ಟ್ರವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

English summary
Indian civil aviation minister Suresh Prabhu said that, center government will construct 100 airports in India in 4.2 lakh crore budget in 10-15 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X