ಕೊರೊನಾ ಕುರಿತು ಮೋದಿ ಸರ್ಕಾರಕ್ಕೆ ಬಲವಾದ ಎಚ್ಚರಿಕೆ ನೀಡಿದ ರಾಹುಲ್
ದೆಹಲಿ, ಜುಲೈ 17: ಕೊರೊನಾ ವೈರಸ್ ಭಾರತದಲ್ಲಿ ಬಹುದೊಡ್ಡ ಸಮಸ್ಯೆ ಸೃಷ್ಟಿಸಲಿದೆ. ಭಾರತದ ಆರ್ಥಿಕತೆ ಪಾತಾಳಕ್ಕೆ ಕುಸಿಯಲಿದೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ ತಿಂಗಳಲ್ಲಿ ಎಚ್ಚರಿಕೆ ನೀಡಿದ್ದರು.
ಆದರೆ ರಾಹುಲ್ ಗಾಂಧಿ ಅವರು ಎಚ್ಚರಿಕೆಯನ್ನು ಆ ಸಮಯದಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ. ಈಗ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ದೇಶದಲ್ಲಿ ವಿಪರೀತವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಮುಂದಿನ 20 ದಿನ ಹೇಗಿರಲಿದೆ ಎಂದು ಹೇಳಿದ್ದಾರೆ. ಆಗಸ್ಟ್ 10ರೊಳಗೆ ದೇಶದಲ್ಲಿ ಎಷ್ಟು ಕೊವಿಡ್ ಕೇಸ್ ಪತ್ತೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮುಂದೆ ಓದಿ...

ಆಗಸ್ಟ್ 10ರೊಳಗೆ 20 ಲಕ್ಷ ಕೇಸ್!
ಕೊರೊನಾ ವೈರಸ್ ಪ್ರಕರಣಗಳ ಏರಿಕೆ ಬಗ್ಗೆ ಶುಕ್ರವಾರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ''ಈ ವಾರಾಂತ್ಯಕ್ಕೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅದೇ ರೀತಿ ಆಗಸ್ಟ್ 10ರೊಳಗೆ ಅದರ ಸಂಖ್ಯೆ 20 ಲಕ್ಷಕ್ಕೆ ಏರಿಕೆಯಾಗಲಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು'' ಎಂದು ಒತ್ತಾಯಿಸಿದ್ದಾರೆ.

ಭಾರತದಲ್ಲಿ 10 ಲಕ್ಷ ಗಡಿ ದಾಟಿದೆ ಕೊರೊನಾ
ಶುಕ್ರವಾರ ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ವರದಿಯಂತೆ ಭಾರತದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಿದೆ. ಈ ಮೂಲಕ ಜಗತ್ತಿನಲ್ಲಿ ಹತ್ತು ಲಕ್ಷ ಕೊರೊನಾ ವೈರಸ್ ಕೇಸ್‌ಗಳನ್ನು ದಾಖಲಿಸಿದ ಮೂರನೇ ದೇಶ ಭಾರತ. ಇದಕ್ಕೂ ಮುಂಚೆ ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ 10 ಲಕ್ಷಕ್ಕೂ ಅಧಿಕ ಕೊವಿಡ್ ಪ್ರಕರಣಗಳು ವರದಿಯಾಗಿವೆ. ಅಲ್ಲಿಗೆ ರಾಹುಲ್ ಗಾಂಧಿ ಹೇಳಿದಂತೆ ಈ ವಾರದಲ್ಲಿ ಭಾರತದ ಹತ್ತು ಲಕ್ಷ ದಾಟಿದೆ.

ಒಂದೇ ದಿನಕ್ಕೆ 35 ಸಾವಿರ ಕೇಸ್
ಗುರುವಾರ ಒಂದೇ ದಿನ ಭಾರತದಲ್ಲಿ 34,956 ಜನರಿಗೆ ಕೊರೊನಾ ದೃಢವಾಗಿದೆ. ಇದುವರೆಗೂ ದಿನವೊಂದರಲ್ಲಿ ವರದಿಯಾದ ಹೆಚ್ಚು ಸೋಂಕು ಇದಾಗಿದೆ. ದೇಶದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಒಟ್ಟು 25,602 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಸೆಪ್ಟೆಂಬರ್ 'ಪ್ರಮುಖ ಘಟ್ಟ'
ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಧ್ಯಯನ ತಂಡ ಹೇಳಿರುವ ಪ್ರಕಾರ, ಪ್ರಸ್ತುತ ಅಂಕಿ ಅಂಶಗಳ ಆಧಾರದಲ್ಲಿ ಸೆಪ್ಟೆಂಬರ್ ಆರಂಭದ ವೇಳೆಗೆ ಭಾರತದಲ್ಲಿ 20 ಲಕ್ಷಕ್ಕೂ ಅಧಿಕ ಕೊವಿಡ್ ಸೋಂಕಿತರು ವರದಿಯಾಗಲಿದ್ದಾರೆ. ಸೆಪ್ಟೆಂಬರ್ 1 ರ ವೇಳೆಗೆ ದೇಶವು ಒಟ್ಟು 20 ಲಕ್ಷ ಪ್ರಕರಣಗಳು, 4.75 ಲಕ್ಷ ಸಕ್ರಿಯ ಕೇಸ್ ಮತ್ತು 88,000 ಸಾವುಗಳ ಗರಿಷ್ಠ ಮಟ್ಟವನ್ನು ತಲುಪಬಹುದು ಎಂದು ತಿಳಿಸಿದೆ. ಆದರೆ, ಭಾರತದಲ್ಲಿ ಸೋಂಕು ವಿಪರೀತವಾದರೆ ಮಾರ್ಚ್ ಅಂತ್ಯಕ್ಕೆ 6 ಕೋಟಿವರೆಗೂ ಕೇಸ್ ವರದಿಯಾಗಬಹುದು ಎಂದು ಐಐಎಸ್ ಎಚ್ಚರಿಕೆ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications