• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಂದಿನ 6 ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ: ಹರ್ಷವರ್ಧನ್

|

ನವದೆಹಲಿ, ಅಕ್ಟೋಬರ್ 16: ಮುಂದಿನ 6 ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೊನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಹಾಗೆಯೇ ಐಆರ್ ಸಿಎಸ್ ತನ್ನ ರಕ್ತ ಕೇಂದ್ರಗಳ ಮೂಲಕ ಜನರಿಗೆ ಯಾವುದೇ ರೀತಿಯ ರಕ್ತದ ಕೊರತೆಯುಂಟಾಗದಂತೆ ನೋಡಿಕೊಳ್ಳುತ್ತಿದೆ. ಸ್ವಯಂಪ್ರೇರಿತ ರಕ್ತದಾನದ ಪ್ರಚಾರದ ನವೀನ ವಿಧಾನಗಳು ಮತ್ತು ಸಿಬ್ಬಂದಿ, ವ್ಯವಸ್ಥಾಪಕರು ಮತ್ತು ಸ್ವಯಂ ಸೇವಕರ ಸಮರ್ಪಿತ ಪ್ರಯತ್ನಗಳು, ದೇಶಾದ್ಯಂತ ರಕ್ತ ಸೇವೆಗಳ 24x7 ಕಾರ್ಯಾಚರಣೆಗಳಿಗೆ ಐಆರ್ ಸಿಎಸ್ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ಮತ್ತೊಂದು ಕೊರೊನಾ ವೈರಸ್ ಲಸಿಕೆಗೆ ರಷ್ಯಾ ಅನುಮತಿ

ಮುಂದಿನ ಆರು ತಿಂಗಳಲ್ಲಿ ಕೊರೋನಾ ಲಸಿಕೆಯನ್ನು ಜನರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತೇವೆ. ಈ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡಲು ನಾವು ಆರು ಅಡಿಗಳಷ್ಟು ದೂರದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.

   BJP ಅವ್ರು ಕೈ ಗೆ ಬಳೆ ಹಾಕೊಬೇಕು | DK Shivkumar | RR Nagar By Election | Oneindia Kannada

   ಜೊತೆಗೆ ನಿಯಮಿತವಾಗಿ ಕೈ ತೊಳೆಯುವುದು ಮತ್ತು ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಇದರಿಂದ ಹಲವರ ಜೀವ ಉಳಿಸಬಹುದು ಎಂದು ಹೇಳಿದ್ದಾರೆ.

   English summary
   India is expected to have a COVID-19 vaccine in a few months and the country should be in the process of delivering it to people in the next six months, Union Health Minister Harsh Vardhan said.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X