ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಉತ್ತರ ಹೇಗಿತ್ತು?

|
Google Oneindia Kannada News

ನವದೆಹಲಿ, ಆಗಸ್ಟ್ 9: ಪೆಗಾಸಸ್ ಬೇಹುಗಾರಿಕೆ ತಂತ್ರಾಂಶ ಬಳಕೆಗೆ ಸಂಬಂಧಿಸಿದಂತೆ ಇಸ್ರೇಲ್ ಮೂಲದ ಎನ್ಎಸ್ಓ ಕಂಪನಿಯ ಜೊತೆಗೆ ಯಾವುದೇ ರೀತಿಯ ವಹಿವಾಟು ಇಟ್ಟುಕೊಂಡಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟವಾಗಿ ಹೇಳಿದೆ. ಮುಂಗಾರು ಅಧಿವೇಶನದಲ್ಲಿ ಭಾರಿ ಸದ್ದು ಗದ್ದಲಕ್ಕೆ ಕಾರಣವಾದ ಪೆಗಾಸಸ್ ಕುರಿತು ಪ್ರಶ್ನೆಗೆ ಉತ್ತರಿಸಲಾಗಿದೆ.

ಇಸ್ರೇಲ್ ಎನ್ಎಸ್ಓ ಕಂಪನಿ ಜೊತೆಗೆ ಪೆಗಾಸಸ್ ಕುರಿತು ನಡೆಸಿರುವ ವಹಿವಾಟು ಯಾವ ಸ್ವರೂಪದಲ್ಲಿದೆ ಎಂಬ ಬಗ್ಗೆ ಸಿಪಿಎಂ ಸಂಸದ ಡಾ ವಿ ಶಿವದರ್ಶನ್ ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಸಂಸದರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಸೋಮವಾರ ಸಚಿವಾಲಯದಿಂದ ಉತ್ತರ ನೀಡಲಾಗಿದೆ.

ಪೆಗಾಸಸ್ ಹಗರಣ: ಕೇಂದ್ರಕ್ಕೆ ಪ್ರತಿ ನೀಡುವಂತೆ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಸೂಚನೆ ಪೆಗಾಸಸ್ ಹಗರಣ: ಕೇಂದ್ರಕ್ಕೆ ಪ್ರತಿ ನೀಡುವಂತೆ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಸೂಚನೆ

ಕೇಂದ್ರ ಗೃಹ ಸಚಿವಾಲಯವು ಎನ್ಎಸ್ಓ ಗ್ರೂಪ್ ಟೆಕ್ನಾಲಜಿ ಜೊತೆಗೆ ಯಾವುದೇ ರೀತಿಯ ವಹಿವಾಟುಗಳನ್ನು ಇಟ್ಟುಕೊಂಡಿಲ್ಲ ಎಂದು ಕಿರಿಯ ರಕ್ಷಣಾ ಸಚಿವ ಅಜಯ್ ಭಟ್ ಲಿಖಿತ ಹಾಗೂ ಪ್ರತಿಕ್ರಿಯೆ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪೆಗಾಸಸ್ ಹಗರಣದ ಹಿನ್ನೆಲೆ, ಪ್ರತಿಪಕ್ಷಗಳ ಆರೋಪ ಮತ್ತು ಕೇಂದ್ರ ಸರ್ಕಾರದ ಉತ್ತರಗಳ ಕುರಿತು ಒಂದು ವರದಿ ಇಲ್ಲಿದೆ ಓದಿ.

ಪ್ರತಿಪಕ್ಷ ನಾಯಕರಲ್ಲಿ ಅಸಮಾಧಾನ

ಪ್ರತಿಪಕ್ಷ ನಾಯಕರಲ್ಲಿ ಅಸಮಾಧಾನ

ಭಾರತದ ಮೇಲೆ ಇದುವರೆಗೂ ಯಾವುದೇ ರೀತಿ ಅಕ್ರಮ ಬೇಹುಗಾರಿಕೆ ಅಥವಾ ಕಣ್ಗಾವಲು ನಡೆದಿಲ್ಲ ಎಂದು ಸರ್ಕಾರವು ಈಗಾಗಲೇ ತಿಳಿಸಿದೆ. ಆದರೆ ಸರ್ಕಾರದ ಪ್ರತಿಕ್ರಿಯೆಯಿಂದ ಪ್ರತಿಪಕ್ಷಗಳನ್ನು ತೃಪ್ತಿಪಡಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಇಂದು ಸರ್ಕಾರವು ಎನ್ಎಸ್ಓದೊಂದಿಗೆ ಯಾವುದೇ ರೀತಿಯ ಒಪ್ಪಂದವನ್ನು ಹೊಂದಿದೆ ಮತ್ತು ಅದು ನಾಗರಿಕರ ಮೇಲೆ ಬೇಹುಗಾರಿಕೆ ನಡೆಸುವುದಕ್ಕೆ ಸಾಧ್ಯವಿದೆಯೇ ಎಂಬುದರ ಬಗ್ಗೆ ಸ್ಪಷ್ಟ ಉತ್ತರ ನೀಡುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.

ಜಾಗತಿಕ ವರದಿಯಲ್ಲಿ ಇಸ್ರೇಲ್ ತಂತ್ರಾಂಶದ ದುರ್ಬಳಕೆ ಉಲ್ಲೇಖ

ಜಾಗತಿಕ ವರದಿಯಲ್ಲಿ ಇಸ್ರೇಲ್ ತಂತ್ರಾಂಶದ ದುರ್ಬಳಕೆ ಉಲ್ಲೇಖ

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಬೇಹುಗಾರಿಕೆ ಆರೋಪವನ್ನು ತಳ್ಳಿ ಹಾಕಿದ ಸಚಿವ ಅಶ್ವಿನಿ ವೈಷ್ಣವ್

ಬೇಹುಗಾರಿಕೆ ಆರೋಪವನ್ನು ತಳ್ಳಿ ಹಾಕಿದ ಸಚಿವ ಅಶ್ವಿನಿ ವೈಷ್ಣವ್

ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದ್ದರು. ಅಲ್ಲದೇ, "ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದರು.

ಪೆಗಾಸಸ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೇಳಿದ್ದೇನು?

ಪೆಗಾಸಸ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೇಳಿದ್ದೇನು?

ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣದ ಆರೋಪ ಗಂಭೀರವಾಗಿದೆ. ಈ ಕುರಿತು ವರದಿಗಳು ಸತ್ಯವಾಗಿದ್ದರೆ ಆಗಸ್ಟ್ 10ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 5ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ನ್ಯಾಯಾಲಯಕ್ಕೆ ನೀಡಿರುವ ಅರ್ಜಿಯಲ್ಲಿ ಅಂಶವನ್ನು ಒಳಗೊಂಡಿರುವ ಒಂದು ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಅರ್ಜಿದಾರರಿಗೆ ಕೋರ್ಟ್ ಸೂಚನೆ ನೀಡಿತ್ತು.

ಇಸ್ರೇಲ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ

ಇಸ್ರೇಲ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

English summary
India Govt has No Transaction With Pegasus NSO Group Technologies: Defence Ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X