• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇಶದಲ್ಲಿ ಆರ್ಥಿಕತೆ ಹದಗೆಡಲು ಕೇಂದ್ರದ ನಿರ್ವಹಣಾ ವೈಫಲ್ಯವೇ ಮುಖ್ಯ ಕಾರಣ:ಕಾಂಗ್ರೆಸ್

|

ನವದೆಹಲಿ,ಫೆಬ್ರವರಿ 27: ಕೇಂದ್ರದಲ್ಲಿ ಆರ್ಥಿಕತೆ ಹದಗೆಡಲು ಕೇಂದ್ರ ಸರ್ಕಾರದ ನಿರ್ವಹಣಾ ವೈಫಲ್ಯವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಮರ್ಪಕ ಯೋಜನೆಯಿಲ್ಲದ ಮತ್ತು ಸಮರ್ಪಕವಲ್ಲದ ಲಾಕ್‌ಡೌನ್‌ನಿಂದಾಗಿ ಆರ್ಥಿಕತೆಯು ಹೊಡೆತ ಅನುಭವಿಸುವಂತಾಗಿದೆ. ಇದು ಈಗಾಗಲೇ ಸರಕು ಮತ್ತು ಸೇವಾ ತೆರಿಗೆಯ ಅಸಮರ್ಪಕ ಅನುಷ್ಠಾನ, ನೋಟು ರದ್ದತಿಯಿಂದ ಆದ ಏಟಿಕೆ ಬರೆ ಎಳೆದಂತಾಗಿದೆ ಎಂದು ಕಾಂಗ್ರೆಸ್‌ನ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''

2021-21ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಆರ್ಥಿಕತೆಯು ಕೇವಲ ಶೇ.04ರಷ್ಟು ಬೆಳವಣಿಗೆ ಕಂಡಿದೆ. ಇದು ಅಂದಾಜಿಸಿದ್ದಕ್ಕಿಂತಲೂ ಕಸಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ತಯಾರಿಕೆ, ಕಟ್ಟಡ ನಿರ್ಮಾಣ ಮತ್ತು ಕೃಷಿ ವಲಯಗಳಲ್ಲಿ ಚೇತರಿಕೆ ಕಂಡುಬಂದ ಕಾರಣದಿಂದ ದೇಶದ ಅರ್ಥ ವ್ಯವಸ್ಥೆ ಡಿಸೆಂಬರ್ ತ್ರೈಮಾಸಿಕದಲ್ಲಿ ಬೆಳವಣಿಗೆಯ ಹಾದಿಗೆ ಮರಳಿದೆ. ಜಿಡಿಪಿಯು 0.4ರಷ್ಟು ಬೆಳವಣಿಗೆ ಕಂಡಿದೆ.

ಮೊದಲ ತ್ರೈಮಾಸಿಕದ ಜಿಡಿಪಿ -23.9 ಇರಲಿದೆ ಎಂದು ಈ ಹಿಂದೆ ಅಂದಾಜಿಸಿದ್ದರೆ ಈಗ ಪರಿಷ್ಕರಣೆಗೊಳಿಸಿ ಶೇ.-24.4 ಎಂದಿರುವುದು ಗಮನಾರ್ಹ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಯಾರಿಕೆ,ಕಟ್ಟಡ ನಿರ್ಮಾಣ ಮತ್ತು ಕೃಷಿ ವಲಯಗಳಲ್ಲಿ ಚೇತರಿಕೆ ಕಂಡುಬಂದ ಕಾರಣದಿಂದಾಗಿ ದೇಶದ ಅರ್ಥ ವ್ಯವಸ್ಥೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಬೆಳವಣಿಗೆಯ ಹಾದಿಗೆ ಮರಳಿದೆ.

ಇಡೀ ಹಣಕಾಸು ವರ್ಷದ ಮುಂಗಡ ಅಂದಾಜಿನ ಬಗ್ಗೆ ಕಾಳಜಿ ವಹಿಸಬೇಕಿದೆ. 2020-21ನೇ ಸಾಲಿನ ಜಿಡಿಪಿ ಬೆಳವಣಿಗೆ ದರ ಶೇ.-7.7ರಷ್ಟಿರಲಿದೆ ಎಂದು ಕೇಂದ್ರ ಸಾಂಖ್ಯಿಕ ಕಚೇರಿಯು ಈ ಹಿಂದೆ ಅಂದಾಜು ಮಾಡಿತ್ತು.ಆದರೆ ಈಗ ಶೇ.-8ರಷ್ಟಿರಲಿದೆ.

English summary
Attacking the government over the state of the economy, the Congress on Friday said the people have been hit by the double whammy of low growth and high inflation for which the Modi government's "gross mismanagement" is responsible.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X