• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ- ಮೋದಿ

|

ದೆಹಲಿ, ಜೂನ್ 27: ಕೊರೊನಾ ವೈರಸ್ ಸುಳಿಗೆ ಸಿಕ್ಕಿರುವ ಭಾರತ ದೇಶ ಇತರೆ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ಉತ್ತಮ ಸ್ಥಿತಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ರೆವೆರೆಂಡ್ ಡಾ ಜೋಸೆಫ್ ಮರ್ ಥೋಮಾ ಅವರ 90ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ ''ದೇಶದಲ್ಲಿ ಕೊರೊನಾ ವೈರಸ್‌ನಿಂದ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದೆ'' ಎಂದು ತಿಳಿಸಿದ್ದಾರೆ.

''ಭಾರತದಲ್ಲಿ ಕೊರೊನಾ ವೈರಸ್ ಬಹಳ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ ಎಂದು ಆರಂಭಿಕ ಹಂತದಲ್ಲಿ ಹಲವರು ಭವಿಷ್ಯ ನುಡಿದರು. ಆದರೆ. ಲಾಕ್‌ಡೌನ್‌ ಹಾಗೂ ಸರ್ಕಾರ ತೆಗೆದುಕೊಂಡ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಾರ್ವಜನಿಕರ ಹೋರಾಟದ ಪರಿಣಾಮ ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ನಮ್ಮ ದೇಶ ಉತ್ತಮ ಸ್ಥಿತಿಯಲ್ಲಿದೆ. ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ'' ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಯೋಧರ ಜೀವ ಮುಖ್ಯವೋ, 56 ಇಂಚಿನ ಪ್ರತಿಷ್ಠೆ ಮುಖ್ಯವೋ?

''ಭಾರತದಲ್ಲಿ ಸುಮಾರು 8 ಕೋಟಿ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಸುಮಾರು 1.5 ಕೋಟಿ ಜನರಿಗೆ ಮನೆ ಕಟ್ಟಿಕೊಡಲಾಗಿದೆ. ಈ ಮೂಲಕ ಭಾರತದ 'ಆಯುಷ್ಮಾನ್ ಭಾರತ್' ಯೋಜನೆ ಜಗತ್ತಿನಲ್ಲಿ ಅತಿ ದೊಡ್ಡ ಆರೋಗ್ಯ ಯೋಜನೆ ಎನಿಸಿಕೊಂಡಿದೆ'' ಎಂದು ಮೋದಿ ಹೇಳಿದ್ದಾರೆ.

ಭಾರತದಲ್ಲಿ ಒಂದೇ ದಿನ 18552 ಸಾವಿರ ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,08,953 ಲಕ್ಷಕ್ಕೆ ಏರಿದೆ. ಚೇತರಿಕೆ ಪ್ರಮಾಣ ಶೇ.58ರಷ್ಟಿದೆ. ಈ ವರೆಗೂ 15685 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

English summary
India is much better placed than many other nations. India's recovery rate is rising said Prime minister Narendra modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X