ದೇಶದಲ್ಲಿ ಒಂದೇ ದಿನ 52,972 ಮಂದಿಗೆ ಸೋಂಕು, 771 ಸಾವು

ದೆಹಲಿ, ಆಗಸ್ಟ್ 03: ಭಾರತದಲ್ಲಿ ಒಂದೇ ದಿನ 52,972 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 18 ಲಕ್ಷ ದಾಟಿದೆ.

ಸೋಮವಾರ ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ವರದಿ ಬಳಿಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,03,696. ಅದರಲ್ಲಿ 1,186,203 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ 5,79,357 ಜನರು ಆಸ್ಪತ್ರೆಗಳಲ್ಲಿ ಚಿಕತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 771 ಜನರು ಕೊರೊನಾ ವೈರಸ್‌ಗೆ ಬಲಿಯಾಗಿದ್ದು, ಇದುವರಗೂ ಮೃತಪಟ್ಟವರ ಸಂಖ್ಯೆ 38,135. ದೇಶದಲ್ಲಿ ಅತಿ ಹೆಚ್ಚು ಕೊವಿಡ್ ಸಾವು ಹೊಂದಿರುವ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

India Reported 52,972 new coronavirus cases in last 24 hours

ಆಗಸ್ಟ್ 2ರಂದು ಭಾರತದಲ್ಲಿ 3,81,027 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಇದುವರೆಗೂ ದೇಶದಲ್ಲಿ (2 ಕೋಟಿ) 2,02,02,858 ಕೊವಿಡ್ ಪರೀಕ್ಷೆ ಮಾಡಲಾಗಿದೆ.

ಇನ್ನುಳಿದಂತೆ ಮಹಾರಾಷ್ಟ್ರದಲ್ಲಿ 4,41,228 ಕೇಸ್ ದಾಖಲಾಗಿದೆ. ತಮಿಳುನಾಡಿನಲ್ಲಿ 2,57,613 ಪ್ರಕರಣ ವರದಿಯಾಗಿದೆ. ಆಂಧ್ರಪ್ರದೇಶದಲ್ಲಿ 1,58,764 ಮಂದಿಗೆ ಕೊರೊನಾ ಅಂಟಿಕೊಂಟಿದೆ. ದೆಹಲಿಯಲ್ಲಿ 1,37,677 ಕೇಸ್ ಹಾಗೂ ಕರ್ನಾಟಕದಲ್ಲಿ 1,34,819 ಪ್ರಕರಣ ಖಚಿತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+