Covid19 Bulletin: 56,282 ಹೊಸ ಕೇಸ್, 20 ಲಕ್ಷದತ್ತ ಭಾರತ

ದೆಹಲಿ, ಆಗಸ್ಟ್ 06: ದೇಶದಲ್ಲಿ ಹೊಸದಾಗಿ 56 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 56,282 ಹೊಸ ಕೇಸ್ ಪತ್ತೆಯಾಗಿದೆ ಹಾಗೂ 904 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದಿನ ವರದಿ ಬಳಿಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ತಲುಪಿದೆ. ಅದರಲ್ಲಿ 13,28,337 ಜನರು ಸೋಂಕಿನಿಂದ ಚಿಕಿತ್ಸೆ ಪಡೆದುಕೊಂಡಿದ್ದರೆ, 5,95,501 ಮಂದಿ ಕ್ವಾರಂಟೈನ್ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ 904 ಜನರು ಕೊರೊನಾಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 40,699ಕ್ಕೆ ಏರಿಕೆಯಾಗಿದೆ.

ಬಹುಶಃ ನಾಳೆಯ ವರದಿಯಷ್ಟರಲ್ಲಿ ಭಾರತದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ.

India Reports 56,282 New Covid19 Cases In The Last 24 Hours

ಇನ್ನು ಆಗಸ್ಟ್ 5 ರಂದು 6,64,949 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಕೊವಿಡ್ ಪರೀಕ್ಷೆಗಳ ಸಂಖ್ಯೆ 2,21,49,351 ತಲುಪಿದೆ.

ನಿನ್ನೆ ಯಾವ ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆಯಾಗಿದೆ:

ಮಹಾರಾಷ್ಟ್ರದಲ್ಲಿ ನಿನ್ನೆ 10309 ಕೇಸ್ ಪತ್ತೆಯಾಗಿದೆ. ತಮಿಳುನಾಡಿನಲ್ಲಿ 5175 ಕೇಸ್, ಆಂಧ್ರಪ್ರದೇಶದಲ್ಲಿ 10128 ಪ್ರಕರಣ, ದೆಹಲಿಯಲ್ಲಿ 1076 ಕೇಸ್ ಹಾಗೂ ಕರ್ನಾಟಕದಲ್ಲಿ 5619 ಕೇಸ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+