ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುದ್ಧ ಟ್ಯಾಂಕ್‌ಗಳನ್ನು ಹೊಡೆದುರುಳಿಸಬಲ್ಲ ಶಕ್ತಿಶಾಲಿ ಕ್ಷಿಪಣಿ 'ನಾಗ್' ಪರೀಕ್ಷೆ ಯಶಸ್ವಿ

|
Google Oneindia Kannada News

ಪೋಖ್ರಾನ್, ಅಕ್ಟೋಬರ್ 22: ಯುದ್ಧ ಟ್ಯಾಂಕರ್‌ಗಳನ್ನು ಹೊಡೆದುರುಳಿಸಬಲ್ಲ ಶಕ್ತಿಶಾಲಿ ಕ್ಷಿಪಣಿ ನಾಗ್ ಪರೀಕ್ಷೆ ಯಶಸ್ವಿಯಾಗಿದೆ.

ದೇಶಿಯ ಕ್ಷಿಪಣಿಗಳನ್ನು ಸತತವಾಗಿ ಯಶಸ್ವಿ ಪರೀಕ್ಷೆ ನಡೆಸುತ್ತಿರುವ ಭಾರತ ಇದೀಗ ಮತ್ತೊಂದು ಕ್ಷಿಪಣಿಯನ್ನು ಯಶಸ್ವಿ ಪರೀಕ್ಷೆ ನಡೆಸಿದೆ. ಹೌದು, ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಟ್ಯಾಂಕ್‌ ನಿರೋಧಕ ಗುರಿ ನಿರ್ದೇಶಿತ 'ನಾಗ್‌' ಕ್ಷಿಪಣಿಯ ಅಂತಿಮ ಪರೀಕ್ಷೆಯಲ್ಲಿ ಭಾರತ ಯಶಸ್ವಿ ಕಂಡಿದೆ.

ನೌಕಾ ಆವೃತ್ತಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿನೌಕಾ ಆವೃತ್ತಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಈ ಮೂಲಕ ಭಾರತದ ಸೇನೆಯ ಕ್ಷಿಪಣಿ ಬತ್ತಳಿಕೆಗೆ ಯುದ್ಧ ಟ್ಯಾಂಕ್‌ ಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ‌ದ ಮೂರನೇ ತಲೆಮಾರಿನ ಶಕ್ತಿಶಾಲಿ ಕ್ಷಿಪಣಿಯೊಂದು ಸೇರ್ಪಡೆಯಾದಂತಾಗಿದೆ.

Indias Lethal Anti-Tank Missile Passes Final Test, To Enter Production

ದೇಶಿಯ ಕ್ಷಿಪಣಿಗಳನ್ನು ಸತತವಾಗಿ ಯಶಸ್ವಿ ಪರೀಕ್ಷೆ ನಡೆಸುತ್ತಿರುವ ಭಾರತ ಇದೀಗ ಮತ್ತೊಂದು ಕ್ಷಿಪಣಿಯನ್ನು ಯಶಸ್ವಿ ಪರೀಕ್ಷೆ ನಡೆಸಿದ್ದು, ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಟ್ಯಾಂಕ್‌ ನಿರೋಧಕ ಗುರಿ ನಿರ್ದೇಶಿತ 'ನಾಗ್‌' ಕ್ಷಿಪಣಿಯ ಅಂತಿಮ ಪರೀಕ್ಷೆ ಯಶಸ್ವಿಯಾಗಿದೆ.

ಡಿಆರ್ ಡಿಒ ಮೂಲಗಳ ಪ್ರಕಾರ ಇಂದು ಬೆಳಗ್ಗೆ 6.45 ಕ್ಕೆ ರಾಜಸ್ತಾನದ ಪೋಖ್ರಾನ್‌ ನ ಫೀಲ್ಡ್ ಫೈರಿಂಗ್ ಶ್ರೇಣಿಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿಯು ನಿರ್ದೇಶಿತ ಗುರಿಯನ್ನು ಯಶಸ್ವಿಯಾಗಿ ಮತ್ತು ನಿಖರವಾಗಿ ತಲುಪಿದೆ.

ಕ್ಷಿಪಣಿಯ ಅಂತಿಮ ಹಂತದ ಪರೀಕ್ಷೆ ಯಶಸ್ವಿಯಾಗಿರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅಪಾರ ಸಂತಸ ವ್ಯಕ್ತಪಡಿಸಿದ್ದು, ಡಿಆರ್‍ಡಿಒ ಅಭಿಮಾನಿಗಳನ್ನು ಅಭಿನಂದಿಸಿದ್ದಾರೆ.

ಭಾರತ ಈವರೆಗೆ ಎರಡನೇ ತಲೆಮಾರಿನ ಮಿಲೆನ್ -2ಟಿ ಮತ್ತು ಕುಂಕುರ್ ಯುದ್ಧ ಟ್ಯಾಂಕ್ ಧ್ವಂಸಕ ಕ್ಷಿಪಣಿಗಳನ್ನು ಮಾತ್ರ ಬಳಸುತ್ತಿದ್ದು, ಈ ಹೊಸ ಅಸ್ತ್ರವು ಭಾರತೀಯ ಭೂ ಸೇನೆಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇಂತಹ ಅತ್ಯಾಧುನಿಕ ಯುದ್ಧ ಟ್ಯಾಂಕ್ ಧ್ವಂಸಕ ಕ್ಷಿಪಣಿ ಅಮೆರಿಕ, ರಷ್ಯಾ, ಫ್ರಾನ್ಸ್ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಮಾತ್ರ ಇವೆ. 2018ರಲ್ಲಿ 200 ನಾಗ್ ಎಟಿಜಿಎಂಗಳನ್ನು ಹೊಂದಲು ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿತ್ತು.

English summary
The final user trial of India's third-generation anti-tank guided missile Nag was carried out today at the Pokhran range in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X