ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4421ಕ್ಕೆ ಏರಿಕೆ
ದೆಹಲಿ, ಏಪ್ರಿಲ್ 7: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್ 9ರ ಬೆಳಿಗ್ಗೆ 9 ಗಂಟೆ ಸುಮಾರಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4421ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Recommended Video
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 354 ಕೊವಿಡ್ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ. ಇನ್ನು 5 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆಯೂ ವರದಿ ನೀಡಿದೆ.
Increase of 354 #COVID19 cases, 5 deaths in last 24 hours; India's positive cases rise to 4421 (including 3981 active cases, 325 cured/discharged/migrated people and 114 deaths): Ministry of Health and Family Welfare pic.twitter.com/OotvtHN18H
— ANI (@ANI) April 7, 2020
ಒಟ್ಟು 4421 ಕೇಸ್‌ನಲ್ಲಿ 3981 ಪ್ರಕರಣಗಳು ಚಾಲ್ತಿಯಲ್ಲಿದೆ. 325 ಜನರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ದೇಶದಲ್ಲಿ ಒಟ್ಟು 114 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಈ ಕಡೆ ಕರ್ನಾಟಕದಲ್ಲಿ ಇದುವರೆಗೂ 163 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದರಲ್ಲಿ 4 ನಾಲ್ಕು ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 55, ಮೈಸೂರಿನಲ್ಲಿ 35, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೀದರ್‌ನಲ್ಲಿ ತಲಾ 10 ಪ್ರಕರಣಗಳು ದಾಖಲಾಗಿದೆ.

ಇನ್ನು ಜಗತ್ತಿನಾದ್ಯಂತ ಒಟ್ಟು 1,347,235 ಜನರಲ್ಲಿ ಕೊರೊನಾ ದೃಢವಾಗಿದೆ. ಅದರಲ್ಲಿ 74,767 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 286,234 ಜನರು ಈ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಇಟಲಿಯಲ್ಲಿ 16,523 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಪೇನ್ ದೇಶದಲ್ಲಿ 13,341 ಜನರು ಸಾವನ್ನಪ್ಪಿದ್ದಾರೆ.












Click it and Unblock the Notifications