ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4421ಕ್ಕೆ ಏರಿಕೆ

|
Google Oneindia Kannada News

ದೆಹಲಿ, ಏಪ್ರಿಲ್ 7: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್ 9ರ ಬೆಳಿಗ್ಗೆ 9 ಗಂಟೆ ಸುಮಾರಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4421ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Recommended Video

ಇನ್ನೂ ಅಬ್ಬರಿಸಲಿದೆ ಕೊರೊನಾ!!ಕೋಡಿ ಶ್ರೀಗಳು ಕೊರೊನಾ ಬಗ್ಗೆ ನುಡಿದ ಭವಿಷ್ಯ ಇಲ್ಲಿದೆ

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 354 ಕೊವಿಡ್ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ. ಇನ್ನು 5 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆಯೂ ವರದಿ ನೀಡಿದೆ.

ಒಟ್ಟು 4421 ಕೇಸ್‌ನಲ್ಲಿ 3981 ಪ್ರಕರಣಗಳು ಚಾಲ್ತಿಯಲ್ಲಿದೆ. 325 ಜನರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ದೇಶದಲ್ಲಿ ಒಟ್ಟು 114 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಕೊರೊನಾ ಸಾವಿಲ್ಲದೇ ಮೊಟ್ಟ ಮೊದಲ ದಿನ ಕಳೆಯಿತಾ ಚೀನಾ?ಕೊರೊನಾ ಸಾವಿಲ್ಲದೇ ಮೊಟ್ಟ ಮೊದಲ ದಿನ ಕಳೆಯಿತಾ ಚೀನಾ?

ಈ ಕಡೆ ಕರ್ನಾಟಕದಲ್ಲಿ ಇದುವರೆಗೂ 163 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದರಲ್ಲಿ 4 ನಾಲ್ಕು ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 55, ಮೈಸೂರಿನಲ್ಲಿ 35, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೀದರ್‌ನಲ್ಲಿ ತಲಾ 10 ಪ್ರಕರಣಗಳು ದಾಖಲಾಗಿದೆ.

India Total COVID19 Cases Rise To 4421

ಇನ್ನು ಜಗತ್ತಿನಾದ್ಯಂತ ಒಟ್ಟು 1,347,235 ಜನರಲ್ಲಿ ಕೊರೊನಾ ದೃಢವಾಗಿದೆ. ಅದರಲ್ಲಿ 74,767 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 286,234 ಜನರು ಈ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಇಟಲಿಯಲ್ಲಿ 16,523 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಪೇನ್ ದೇಶದಲ್ಲಿ 13,341 ಜನರು ಸಾವನ್ನಪ್ಪಿದ್ದಾರೆ.

English summary
Increase of 354 COVID19 cases, 5 deaths in last 24 hours; India's positive cases rise to 4421: Ministry of Health and Family Welfare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X