• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬ್ರೆಜಿಲ್‌ಗೆ ಕೊರೊನಾ ಲಸಿಕೆ ಪೂರೈಕೆ: 'ಗೌರವ ನಮ್ಮದು' ಎಂದ ಪ್ರಧಾನಿ ನರೇಂದ್ರ ಮೋದಿ

|

ನವದೆಹಲಿ, ಜನವರಿ 23: ರಾಮಾಯಣದಲ್ಲಿ ಸಂಜೀವಿನಿ ಪರ್ವತ ಹೊತ್ತು ತಂದು ಲಕ್ಷಣನಿಗೆ ಜೀವದಾನ ನೀಡಿದ ಹನುಮಂತನಂತೆ ಕೊರೊನಾವೈರಸ್ ಲಸಿಕೆಗಳನ್ನು ಭಾರತವು ಬ್ರೆಜಿಲ್‌ಗೆ ಕಳುಹಿಸಿಕೊಟ್ಟು ನಮ್ಮ ಪ್ರಜೆಗಳ ಜೀವ ಉಳಿಸಲಾಗಿದೆ ಎಂದು ಬ್ರೆಜಿಲ್ ಅಧ್ಯಕ್ಷ ಭಾರತವನ್ನು ಹೊಗಳಿದ ಬೆನ್ನಲ್ಲೇ , ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.

ಹನುಮಂತ ಸಂಜೀವಿನಿ ಹೊತ್ತು ಭಾರತದಿಂದ ಬ್ರೆಜಿಲ್‌ಗೆ ಜಿಗಿಯುತ್ತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದ ಬ್ರೆಜಿಲ್ ಅಧ್ಯಕ್ಷ ಭಾರತದ ಸಹಾಯಕ್ಕೆ ತಾನು ಎಂದಿಗೂ ಋಣಿ ಎಂಬುದನ್ನು ತಿಳಿಸಿತ್ತು.

ಭಾರತವನ್ನು ಸಂಜೀವಿನಿ ಹೊತ್ತು ತರುವ ಹನುಮಂತನಿಗೆ ಹೋಲಿಸಿದ ಬ್ರೆಜಿಲ್ ಅಧ್ಯಕ್ಷ

ಕೊರೊನಾದ ತುರ್ತು ಪರಿಸ್ಥಿತಿಯಲ್ಲಿ ಭಾರತದಂತಹ ಸ್ನೇಹಪರ ಸ್ನೇಹಿತನನ್ನು ಕಂಡುಕೊಳ್ಳುವ ಮೂಲಕ ಬ್ರೆಜಿಲ್ ಗೌರವವನ್ನು ಅನುಭವಿಸುತ್ತಿದೆ. ಈ ಕಷ್ಟದ ಸಮಯದಲ್ಲಿ ಲಸಿಕೆ ಕಳುಹಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಹೇಳಿರುವ ಬ್ರೆಜಿಲ್ ಅಧ್ಯಕ್ಷ ಜಾರ್ ಬೋಲ್ಸನಾರೊ ಅವರು ಜಾಗತಿಕ ತುರ್ತು ಪರಿಸ್ಥಿತಿಗೆ ಸಹಾಯ ಮಾಡಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ.

ಬ್ರೆಜಿಲ್ ಅಧ್ಯಕ್ಷರ ಟ್ವೀಟ್ ಅನ್ನು ಉಲ್ಲೇಖಿಸಿದ ಪಿಎಂ ಮೋದಿ, ಬ್ರೆಜಿಲ್ ಅನ್ನು ಭಾರತದ ವಿಶ್ವಾಸಾರ್ಹ ಮಿತ್ರ ಎಂದು ಬಣ್ಣಿಸಿದ್ದಾರೆ. ಬ್ರೆಜಿಲ್ ಅಧ್ಯಕ್ಷರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ '' ಗೌರವ ನಮ್ಮದು. ಕೋವಿಡ್-19 ವಿರುದ್ಧ ಹೋರಾಡುವಲ್ಲಿ ಬ್ರೆಜಿಲ್ ನಮ್ಮ ವಿಶ್ವಾಸಾರ್ಹ ಪಾಲುದಾರ. ಉಭಯ ದೇಶಗಳು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ಬದ್ಧರಾಗಿದ್ದೇವೆ'' ಎಂದಿದ್ದಾರೆ.

ಭಾರತವು ಪ್ರಸ್ತುತ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ಭಾರತದಲ್ಲಿ ಎರಡು ಲಸಿಕೆಗಳನ್ನು ಬಳಸಲಾಗುತ್ತಿದೆ ಮತ್ತು ಈವರೆಗೆ 125 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ತನ್ನ ಸ್ನೇಹ ದೇಶಗಳಿಗೆ ಕಳುಹಿಸಿದೆ.

ಭಾರತವು ತನ್ನ ನೆರೆಯ ರಾಷ್ಟ್ರಗಳಾದ ನೇಪಾಳ, ಬಾಂಗ್ಲಾದೇಶ, ಮಾರಿಷಸ್, ಮನ್ಮಾರ್, ಮಾಲ್ಡೀವ್ಸ್ ಮತ್ತು ಭೂತಾನ್ ದೇಶಗಳಿಗೆ ಲಕ್ಷಾಂತರ ಪ್ರಮಾಣದ ಲಸಿಕೆಗಳನ್ನು ಉಡುಗೊರೆಯಾಗಿ ಕಳುಹಿಸಿದೆ. ಭಾರತವು ನೀಡಿದ ಸಹಾಯಕ್ಕಾಗಿ ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಭಾರತಕ್ಕೆ ಸಹಾಯ ಮಾಡಿದ್ದಕ್ಕಾಗಿ ಡಬ್ಲ್ಯುಎಚ್‌ಒ ಪ್ರಶಂಸೆಗೆ ಪಾತ್ರವಾಗಿದೆ.

English summary
Modi replied on Twitter, saying the honour was India's in being a trusted partner of Brazil in fighting the pandemic together
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X