• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತ-ಪಾಕಿಸ್ತಾನ ಕದನ ಟ್ವೀಟ್, ಕಪಿಲ್ ವಿರುದ್ಧ ಎಫ್ಐಆರ್

|

ನವದೆಹಲಿ, ಜನವರಿ 23: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ ಪಿಆರ್) ಕುರಿತಂತೆ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಗುರುವಾರದಂದು ಮಾಡಿದ ಟ್ವೀಟ್ ಮೇಲೆ ಚುನಾವಣಾ ಆಯೋಗದ ಕೆಂಗಣ್ಣು ಬೀರಿದ್ದು, ವಿವಾದಿತ ಟ್ವೀಟ್ ವಿರುದ್ಧ ಕ್ರಮ ಜರುಗಿಸುವಂತೆ ಆಯೋಗ ಸೂಚಿಸಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಪಿಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಫೆಬ್ರವರಿ 8ರಂದು ಭಾರತ ಹಾಗೂ ಪಾಕಿಸ್ತಾನದ ಕದನ ನೋಡಬಹುದು ಎಂದಿದ್ದರು. ಶಹೀನ್ ಬಾಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗಳನ್ನು ವಿರೋಧಿಸಿ, ದೆಹಲಿ ಚುನಾವಣೆಯನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ಧ ಎಂಬರ್ಥದಲ್ಲಿ ಮಿಶ್ರಾ ಹೇಳಿದ್ದರು.

ದೆಹಲಿ ಮುಖ್ಯ ಚುನಾವಣಾ ಅಧಿಕಾರಿಯವರು ಆಯೋಗಕ್ಕೆ ಈ ಕುರಿತಂತೆ ಪತ್ರ ಕಳಿಸಿ, ಟ್ವೀಟ್ ಡಿಲೀಟ್ ಮಾಡಲು ಶಿಫಾರಸು ಕಳಿಸಿದ್ದರು. ನಂತರ ಟ್ವೀಟ್ ಕುರಿತಂತೆ ಮಿಶ್ರಾಗೆ ಶೋಕಾಸ್ ನೋಟಿಸ್ ನೀಡಿದ್ದರು. ಈಗ ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 125 ಅನ್ವಯ ಮಾಡೆಲ್ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಫ್ಐಆರ್ ಹಾಕಿದ್ದಾರೆ. ಈ ನಡುವೆ ಆಯೋಗದ ಕೋರಿಕೆ ಮೇರೆಗೆ ವಿವಾದಿತ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಟ್ವಿಟ್ಟರ್ ಸಂಸ್ಥೆ ತಿಳಿಸಿದೆ.

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿದ್ದ ಮಿಶ್ರಾ ಈಗ ಬಿಜೆಪಿಯಿಂದ ಮಾಡೆಲ್ ಟೌನ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. 2017ರಲ್ಲಿ ಮಾಜಿ ಎಎಪಿ ನಾಯಕ ಮಿಶ್ರಾರನ್ನು ಕೇಜ್ರಿವಾಲ್ ಅವರು ಸಂಪುಟದಿಂದ ಕೈಬಿಟ್ಟಿದ್ದರು. ನಂತರ ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಎಎಪಿ ಶಾಸಕತ್ವದಿಂದ ಅನರ್ಹಗೊಂಡಿದ್ದರು.

ದೆಹಲಿ ಚುನಾವಣೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಿಶ್ರಾ, ಪಾಕಿಸ್ತಾನ ಈಗಾಗಲೇ ಶಹೀನ್ ಬಾಗ್ ಪ್ರವೇಶಿಸಿದೆ ಹಾಗೂ ಪಾಕಿಸ್ತಾನದ ಕೆಲ ತುಣುಕುಗಳನ್ನು ದೆಹಲಿಯಲ್ಲಿ ಕಾಣಬಹುದು ಎಂದಿದ್ದರು.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸುಲಭವಾಗಿ ಜಯಭೇರಿ ಬಾರಿಸಲಿದ್ದು, ಕೇಜ್ರಿವಾಲ್ ಅವರು ಫೆಬ್ರವರಿ 11ರಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮಿಶ್ರಾ ಅವರು ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿ ಎದುರು ಸ್ಪರ್ಧೆಗಿಳಿದಿದ್ದಾರೆ.

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ.

ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ. ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ. ದೆಹಲಿಯಲ್ಲಿ ಜನವರಿ 14ರಿಂದ ಚುನಾವಣಾ ಆಯೋಗ ಅಧಿಸೂಚನೆ ಜಾರಿಯಾಗಲಿದೆ. ಜನವರಿ 24ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದು. ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.

English summary
Delhi Police on Friday lodged an FIR against BJP candidate Kapil Mishra in connection with his controversial tweet in which he likened the election in the city to an India versus Pakistan contest, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X