ಭಾರತ-ಚೀನಾ ಬ್ರಿಗೇಡಿಯರ್ ಹಂತದ 5ನೇ ಸಭೆ

ನವದೆಹಲಿ, ಸಪ್ಟೆಂಬರ್.03: ಭಾರತ-ಚೀನಾ ಪೂರ್ವ ಭಾಗದ ಲಡಾಖ್ ಗಡಿ ಸಂಘರ್ಷದ ಕುರಿತು ಉಭಯ ರಾಷ್ಟ್ರಗಳ ನಡುವೆ ಬ್ರಿಗೇಡಿಯರ್ ಹಂತದ ಶಾಂತಿ ಮಾತುಕತೆ ನಡೆಸಲಾಗುತ್ತಿದೆ. ಚುಶುಲ್ ಬಯಲು ಪ್ರದೇಶದಲ್ಲಿ ಸೇನಾಧಿಕಾರಿಗಳು ಗುರುವಾರ 5ನೇ ಸುತ್ತಿನ ಚರ್ಚೆ ನಡೆಸುತ್ತಿದ್ದಾರೆ.

ಪೂರ್ವ ಲಡಾಖ್ ಭಾಗದ ಚುಶುಲ್ ಪ್ರದೇಶದಲ್ಲಿ ಬಹಿರಂಗವಾಗಿ ಉಭಯ ರಾಷ್ಟ್ರಗಳ ಬ್ರಿಗೇಡಿಯರ್ ಹಂತದ ಅಧಿಕಾರಿಗಳು ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಂಘರ್ಷದ ಕುರಿತು ಪರಾಮರ್ಶೆ ನಡೆಸುತ್ತಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಚೀನಾದ ಯೋಧರು ಲಡಾಖ್ ಗಡಿ ಪ್ರದೇಶದಲ್ಲಿ ನಿಗದಿತ ಗಡಿ ರೇಖೆಯನ್ನು ಅತಿಕ್ರಮವಾಗಿ ಪ್ರವೇಶಿಸಲು ಮುಂದಾಗಿದ್ದರು. ಈ ವೇಳೆ ಭಾರತೀಯ ಯೋಧರು ಅದನ್ನು ತಡೆಯುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

Indian And Chinese Brigadiers Hold Talks In Open Area In Chushul

ಕಳೆದ ಆಗಸ್ಟ್.29 ಮತ್ತು 30ರ ಮಧ್ಯರಾತ್ರಿ ಪ್ಯಾಂಗಾಂಗ್ ತ್ಸೋ ಸರೋವರ ಪ್ರದೇಶದಲ್ಲಿ ಚೀನಾ ಸೇನಾಪಡೆಗಳು ಪ್ರಚೋದನಾತ್ಮಕ ಸೇನಾ ಚಟುವಟಿಕೆಗಳನ್ನು ನಡೆಸಿತು. ದಕ್ಷಿಣ ಪ್ರದೇಶದಲ್ಲಿ ಚೀನಾದ 450 ಸೇನಾ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. ಚೀನಾದ ನಡೆಯಿಂದ ಗಡಿಯಲ್ಲಿ ಯಥಾಸ್ಥಿತಿಗೆ ಧಕ್ಕೆ ಉಂಟಾಗಿದೆ ಎಂದು ಭಾರತೀಯ ಸೇನಾಧಿಕಾರಿ ಆರೋಪಿಸಿದ್ದರು.

ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಪ್ರಚೋದನಾತ್ಮಕ ಸೇನಾ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಸಿಕ್ಕಿತ್ತು. ಇದರ ಬೆನ್ನಲ್ಲೇ ಗಡಿ ಪ್ರದೇಶದ ಇತರೆ ಕಡೆಗಳಲ್ಲಿ ಚೀನಾ ಸೇನೆಯು ಅತಿಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುವ ಸಾಧ್ಯತೆಗಳಿವೆ ಎಂದು ಭಾರತೀಯ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+