Breaking: ಪೆಗಾಸಸ್ ಪ್ರಕರಣಗಳ ತನಿಖೆಗೆ ಸರಕಾರ ಸಹಕರಿಸಿಲ್ಲ; ವರದಿ
ನವದೆಹಲಿ, ಆಗಸ್ಟ್ 25: ಭಾರತ ಸರಕಾರ ಪೆಗಾಸಸ್ ಪ್ರಕರಣಗಳ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಸಮಿತಿ ಹೇಳಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಗುರುವಾರ ಹೇಳಿದರು.
ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಗುರುವಾರ ಪೆಗಾಸಸ್ ಸ್ಪೈವೇರ್ ಪ್ರಕರಣಗಳ ವಿಚಾರಣೆಯನ್ನು ನಡೆಸಿದೆ. ವಿಚಾರಣೆ ವೇಳೆ 29 ಫೋನ್‌ಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಐದು ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆಯಾಗಿದೆ. ಆದರೆ, ಪೆಗಾಸಸ್ ಸ್ಪೈವೇರ್‌ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ತಿಳಿಸಿದೆ.
ಸುಪ್ರೀಂ ಕೋರ್ಟ್ ಈ ವಿಷಯದ ಕುರಿತು ರಚಿಸಿರುವ ಸಮಿತಿಯು ಸಲ್ಲಿಸಿದ ವರದಿಯನ್ನು ಪರಿಶೀಲಿಸುತ್ತಿದೆ. ಜೊತೆಗೆ ಪೆಗಾಸಸ್ ಸ್ಪೈವೇರ್ ಪ್ರಕರಣಗಳ ತನಿಖೆಗೆ ಸರಕಾರವು ಸಹಕರಿಸಲಿಲ್ಲ ಎಂದು ಸಮಿತಿಯ ವರದಿ ಹೇಳಿದೆ. ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಒತ್ತಿ ಹೇಳಿದರು.

"ಪೆಗಾಸಸ್ ಸಮಿತಿಯ ವರದಿಯ ಕೆಲವು ಭಾಗವು ಗೌಪ್ಯವಾಗಿದೆ ಮತ್ತು ಖಾಸಗಿ ಮಾಹಿತಿಯನ್ನು ಒಳಗೊಂಡಿರಬಹುದು. ತಾಂತ್ರಿಕ ಸಮಿತಿಯ ವರದಿಗಳನ್ನು ಸಾರ್ವಜನಿಕಗೊಳಿಸಬಾರದು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ" ಎಂದು ನ್ಯಾಯಮೂರ್ತಿ ರಮಣ ಹೇಳಿದರು.
ಪೆಗಾಸಸ್ ಪ್ಯಾನೆಲ್ ಸ್ಕ್ಯಾನ್ ಮಾಡಿದ ಯಾವುದೇ 29 ಫೋನ್‌ಗಳಲ್ಲಿ ಪೆಗಾಸಸ್ ಸ್ಪೈವೇರ್ ಇರುವ ಬಗ್ಗೆ ಪುರಾವೆಗಳಿವೆ. ಕೆಲವು ಮಾಲ್‌ವೇರ್ ಐದು ಫೋನ್‌ಗಳಲ್ಲಿ ಕಂಡುಬಂದಿದೆ ಆದರೆ ಅದು ಪೆಗಾಸಸ್ ಎಂದು ತೋರಿಸಲು ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ಸಮಿತಿಯ ವರದಿ ಹೇಳಿದೆ.
ಈ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಎರಡು ವರದಿಗಳು ಮತ್ತು ಮೇಲ್ವಿಚಾರಣಾ ಸಮಿತಿಯ ಒಂದು ವರದಿಯನ್ನು ಮೂರು ಭಾಗಗಳಲ್ಲಿ ಸಲ್ಲಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವರದಿಯ ಒಂದು ಭಾಗವನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲಾಗುವುದು ಎಂದು ಹೇಳಿದೆ. "ನಾವು ನಮ್ಮ ವೆಬ್‌ಸೈಟ್‌ನಲ್ಲಿ ನ್ಯಾಯಮೂರ್ತಿ ರವೀಂದ್ರನ್ ಅವರ ವರದಿಯ ಮೂರನೇ ಭಾಗವನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೇವೆ" ಎಂದು ಸಿಜೆಐ ಹೇಳಿದರು, ಸಮಿತಿಯು ಸಂಪೂರ್ಣ ವರದಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಪ್ರಕಟಿಸದಂತೆ ಕೇಳಿಕೊಂಡಿದೆ ಎಂದು ತಿಳಿಸಿದ್ದಾರೆ.

ಕೆಲವು ಅರ್ಜಿದಾರರು ವರದಿಯ ಮೊದಲ ಎರಡು ಭಾಗಗಳ ಪ್ರತಿಯನ್ನು ಕೇಳಿದರು. ಅವರ ಮನವಿಯನ್ನು ನ್ಯಾಯಾಲಯ ಪರಿಶೀಲಿಸಲಿದೆ. ಸಂಪೂರ್ಣ ವರದಿಯನ್ನು ಪರಿಶೀಲಿಸದೆ ನಾವು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿ ರಮಣ ಹೇಳಿದರು.
ತನಿಖೆಗೆ ಸರಕಾರ ಸಹಕರಿಸದ ಬಗ್ಗೆ ಉಲ್ಲೇಖಿಸಿರುವ ಸಿಜೆಐ, "ನೀವು ಇಲ್ಲಿ ತೆಗೆದುಕೊಂಡ ಅದೇ ನಿಲುವನ್ನು ನೀವು ಅಲ್ಲಿಯೂ ತೆಗೆದುಕೊಂಡಿದ್ದೀರಿ" ಎಂದು ಹೇಳಿದರು. ಈ ಬಗ್ಗೆ ಸಾಲಿಸಿಟರ್ ಜನರಲ್ ತಮಗೆ ತಿಳಿದಿಲ್ಲ ಎಂದು ತಿಳಿಸಿದರು.
ಸಾರ್ವಜನಿಕಗೊಳಿಸಬಹುದಾದ ಪೆಗಾಸಸ್ ಸಮಿತಿಯ ವರದಿಯ ಭಾಗಗಳನ್ನು ಖಚಿತಪಡಿಸಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣವನ್ನು ನಾಲ್ಕು ವಾರಗಳವರೆಗೆ ಮುಂದೂಡಿದೆ.
ಕೇಂದ್ರ ಸರಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ಆರೋಪವಿದೆ ಇದಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ ಸಮಿತಿ ಸುಪ್ರೀಂಕೋರ್ಟ್‌ಗೆ ತನ್ನ ವರದಿ ಸಲ್ಲಿಸಿದೆ.
ದೇಶದ 500ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.












Click it and Unblock the Notifications