ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಎ ಅನುಷ್ಠಾನಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ 2 ಅರ್ಜಿ

|
Google Oneindia Kannada News

ನವದೆಹಲಿ, ಜನವರಿ.16: ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸುವ ಕೇಂದ್ರ ಸರ್ಕಾರದ ಅಧಿಸೂಚನೆಗೆ ತಡೆ ನೀಡಬೇಕು ಎಂದು ಕೋರಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಗುರುವಾರ ಸುಪ್ರೀಂಕೋರ್ಟ್ ಗೆ ಈ ಸಂಬಂಧ ಎರಡು ಹೊಸ ಅರ್ಜಿಗಳನ್ನು ಸಲ್ಲಿಸಲಾಗಿದೆ. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆಕೇಂದ್ರ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆ

ಕೇಂದ್ರ ಸರ್ಕಾರ ಸಾಕಷ್ಟು ವಿರೋಧದ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಆರಂಭವಾಗಿರುವ ಸಿಎಎ ಅನುಷ್ಠಾನ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮುಸ್ಲಿಂ ಲೀಗ್ ಸುಪ್ರೀಂಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿದೆ.

Indian Union Muslim League Files Two Fresh Petitions In Supreme Court Against CAA Implement

ಜನವರಿ.10ರಂದು ಸಿಎಎ ಅಧಿಸೂಚನೆ:

ಕಳೆದ ಜನವರಿ.10ರ ಶುಕ್ರವಾರ ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸುವಂತೆ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಇದೀಗ ಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಸುಪ್ರೀಂಕೋರ್ಟ್ ಗೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ.

English summary
Citizenship Amendment Act: Indian Union Muslim League Files Two Fresh Petitions In Supreme Court Against CAA Implement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X