ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದು ವರ್ಷಕ್ಕೂ ಅಧಿಕ ಕಾಲ ಲಸಿಕೆ ಕಾರ್ಯಕ್ರಮ

|
Google Oneindia Kannada News

ನವದೆಹಲಿ, ಜನವರಿ 12: ಇದೇ ಜನವರಿ 16ರಿಂದ ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ನೀಡುವ ಅಭಿಯಾನ ಆರಂಭವಾಗುತ್ತಿದ್ದು, ಎಲ್ಲಾ ರಾಜ್ಯಗಳಲ್ಲಿಯೂ ಲಸಿಕೆ ನೀಡಲು ಸಿದ್ಧತೆ ನಡೆಯುತ್ತಿದೆ.

ಮಂಗಳವಾರದಿಂದ ಲಸಿಕೆ ವಿತರಣೆ ಕಾರ್ಯ ಆರಂಭಗೊಂಡಿದ್ದು, ಹಲವು ರಾಜ್ಯಗಳಿಗೆ ಕೊರೊನಾ ಲಸಿಕೆಗಳು ತಲುಪುತ್ತಿವೆ. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯವು, "ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಸಂಪೂರ್ಣವಾಗಲು ಒಂದು ವರ್ಷಕ್ಕೂ ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು" ಎಂದು ಮಾಹಿತಿ ನೀಡಿದೆ.

3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಉಚಿತ: ನರೇಂದ್ರ ಮೋದಿ3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಉಚಿತ: ನರೇಂದ್ರ ಮೋದಿ

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, "ಕೊರೊನಾ ಲಸಿಕೆಯ ಎರಡು ಡೋಸ್ ಗಳನ್ನು ನೀಡಿದ ನಂತರ ಅದು ಪರಿಣಾಮ ಬೀರಲು 14 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಪ್ರಕ್ರಿಯೆಗಳೆಲ್ಲಾ ಪೂರೈಸಲು ಹಾಗೂ ಭಾರತದ ಜನಸಂಖ್ಯೆಯ ಆಧಾರದ ಮೇಲೆ ಕೊರೊನಾ ಲಸಿಕೆಯನ್ನು ನೀಡಲು ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸಮಯವೂ ಅವಶ್ಯಕವಾಗಿದೆ" ಎಂದು ತಿಳಿಸಿದ್ದಾರೆ.

Indias COVID 19 Vaccination Drive Last Beyond One Year Said Health ministry

"ಸೆರಂ ಇನ್ ಸ್ಟಿಟ್ಯೂಟ್ ಹಾಗೂ ಭಾರತ್ ಬಯೋಟೆಕ್ ನಿಂದ ಮೊದಲ ಹಂತದ ಲಸಿಕೆಗಳು ತಲುಪಿವೆ. ಸಕಾರಾತ್ಮಕ ಸಂಗತಿ ಎಂದರೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ತಗ್ಗುತ್ತಿದೆ. ಕೇರಳ, ಮಹಾರಾಷ್ಟ್ರ, ಎರಡು ರಾಜ್ಯಗಳಲ್ಲಿ ಮಾತ್ರ 50 ಸಾವಿರ ಮೇಲ್ಪಟ್ಟ ಸಕ್ರಿಯ ಪ್ರಕರಣಗಳಿವೆ. ಇನ್ನಷ್ಟು ತಗ್ಗಿದರೆ ಲಸಿಕೆ ನೀಡುವ ಪ್ರಕ್ರಿಯೆಯೂ ಸುಲಭವಾಗುತ್ತದೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

English summary
The Central health ministry on Tuesday said that the COVID-19 vaccination process in the country will take more than one year to complete,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X