ಶಿವ ದೇವಾಲಯಗಳಲ್ಲಿ ಉಗ್ರರ ದಾಳಿ ಸಾಧ್ಯತೆ: ಎಲ್ಲೆಡೆ ಕಟ್ಟೆಚ್ಚರ!
ನವದೆಹಲಿ, ಫೆಬ್ರವರಿ 12: ದೇಶದಲ್ಲಿರುವ ಪ್ರಮುಖ ಶಿವ ದೇವಾಲಯಗಳಲ್ಲಿ ಉಗ್ರರ ದಾಳಿಯಾಗುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವುದರಿಂದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ಮಂಗಳವಾರ (ಫೆ.13) ಭಾರತದಾದ್ಯಂತ ಶಿವರಾತ್ರಿ ಆಚರಣೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ದಿನ ದೇಶದ ಪ್ರಮುಖ ದೇವಾಲಯಗಳಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ದೊರೆತಿದೆ.

ಗುಪ್ತಚರ ಇಲಾಖೆಯ ಎಚ್ಚರಿಕೆಯ ಮೇರೆಗೆ ದೇಶದಲ್ಲಿರುವ ಎಲ್ಲಾ ಪ್ರಮುಖ ಶಿವದೇವಾಲಯಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುಖ್ಯವಾಗಿ ಪಂಜಾಬ್, ಹರ್ಯಾಣ, ಜಮ್ಮು, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಉತ್ತರಾಖಂಡಗಳಲ್ಲಿರುವ ಶಿವ ದೇವಾಲಯಗಳಲ್ಲಿ ದಾಳಿ ನಡೆಯುವ ಸಾದ್ಯತೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.












Click it and Unblock the Notifications