Interim Union Budget 2019: ಭರಪೂರ ಕೊಡುಗೆ ನಿರೀಕ್ಷೆ
ನವದೆಹಲಿ, ಫೆಬ್ರವರಿ 01: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಅನ್ನು ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಶುಕ್ರವಾರ(ಫೆ.01) ಮಂಡಿಸಲಿದ್ದಾರೆ.
ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಖಾತೆಯ ಹೊಣೆಗಾರಿಕೆಯನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಕಳೆದ ವಾರವೇ ತಾತ್ಕಾಲಿಕವಾಗಿ ವರ್ಗಾಯಿಸಲಾಗಿತ್ತು.
ಇದೇ ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಮಧ್ಯಮ ವರ್ಗದ ಜನರಿಗೆ ಭರಪೂರ ಕೊಡುಗೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಬಜೆಟ್ 2019: ನೀವು ನಿರೀಕ್ಷೆ ಮಾಡಬಹುದಾದ 5 ತೆರಿಗೆ ವಿನಾಯಿತಿಗಳ ಪಟ್ಟಿ ಇಲ್ಲಿದೆ..
ಆದಾಯ ತೆರಿಗೆ ಸ್ಲ್ಯಾಬ್ , ಜಿಎಸ್ಟಿ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆಯಾಗಬಹುದು ಎಂದು ಜನಸಾಮಾನ್ಯರು ಕಾತರದಿಂದ ಕಾಯುತ್ತಿದ್ದಾರೆ. ಬಜೆಟ್ ಕುರಿತು ಶ್ರೀಸಾಮಾನ್ಯನಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿರುವುದರಿಂದ ಮೋದಿ ಸರ್ಕಾರ ಈ ಬಜೆಟ್ ಅನ್ನು ಜನತೆಯ ಓಲೈಕೆಗೆ ಬಳಸಿದರೆ ಅಚ್ಚರಿಯಿಲ್ಲ. ಇಂದಿನ ಬಜೆಟ್ ಮೇಲೆ ಧನಾತ್ಮಕ ನಿರೀಕ್ಷೆ ಇರುವುದರಿಂದಲೇ ಗುರುವಾರ ಶೇರು ಪೇಟೆ ಸೂಚ್ಯಂಕ 600 ಅಂಕಗಳಷ್ಟು ಜಿಗಿದಿತ್ತು!
ಇಂದು 11 ಗಂಟೆಗೆ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ಮತ್ತು ಗುಡ್ ರಿಟರ್ನ್ಸ್ ಕನ್ನಡ ನೀಡಲಿದೆ.
Delhi: Piyush Goyal arrives at the Ministry of Finance. He will present interim Budget 2019-20 in the Parliament today. #Budget2019 pic.twitter.com/fHQMwkSXc1
— ANI (@ANI) February 1, 2019
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications