ಜಾಗತಿಕ ಧ್ವನಿ: ದೆಹಲಿ ರೈತರ ಹೋರಾಟಕ್ಕೆ ಪಾಪ್ ಗಾಯಕಿ ರಿಹನ್ನಾ ಬೆಂಬಲ
ನವದೆಹಲಿ, ಫೆಬ್ರವರಿ.03: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹನ್ನಾ ಬೆಂಬಲ ವ್ಯಕ್ತಪಡಿಸಿದ್ದಾರೆ. ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎನ್ನುವ ಬಗ್ಗೆ ಸಿಎನ್ಎಸ್ ಪ್ರಕಟಿಸಿದ ಸುದ್ದಿಯನ್ನು ಅವರು ಟ್ವೀಟ್ ಮಾಡಿದ್ದಾರೆ.
ಟ್ವಿಟರ್ ನಲ್ಲಿ 10 ಕೋಟಿಗೂ ಅಧಿಕ ಫಾಲೋವರ್ಸ್ ರನ್ನು ಹೊಂದಿರುವ ಪಾಪ್ ಗಾಯಕಿ ರಿಹನ್ನಾ ಅವರು, ಸಿಎಎನ್ ಸುದ್ದಿಯನ್ನು ಟ್ವೀಟ್ ಮಾಡಿದ್ದು, ನಾವೇಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಪಂಜಾಬ್ ಹಾಗೂ ಹರಿಯಾಣದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾಪ್ ಗಾಯಕಿ ರಿಹನ್ನಾ ಟ್ವೀಟ್ ಬಗ್ಗೆ ಮೆಚ್ಚುಗೆ:
ರೈತರ ಪ್ರತಿಭಟನೆ ಮತ್ತು ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿರುವ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹನ್ನಾ ಅವರ ಬಗ್ಗೆ ಟ್ವಿಟ್ಟಗರು ಮತ್ತು ಬಾಲಿವುಡ್ ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಹನ್ನಾ ಅವರು ಮಾಡಿರುವ ಟ್ವೀಟ್ ಗೆ ಒಂದೇ ಗಂಟೆಯಲ್ಲಿ ಲಕ್ಷಕ್ಕಿಂತ ಹೆಚ್ಚು ಲೈಕ್ ಬಂದಿದ್ದು, ಒಂದು ಲಕ್ಷಕ್ಕಿಂತ ಅಧಿಕ ಮಂದಿ ರೀ-ಟ್ವೀಟ್ ಮಾಡಿದ್ದಾರೆ.
ಬಾಲಿವುಡ್ ನಟ ರಿಚಾ ಚಾಂದ್ ಮತ್ತು ಸ್ವರ ಭಾಸ್ಕರ್, ದಿಲ್ಜಿತ್ ದೋಸಂಜ್, ತಾಪ್ಸಿ ಪನ್ನು, ಸೋನು ಸೂದ್, ಹಂಸನ್ ಮೆಹ್ತಾ, ಮೊಹಮ್ಮದ್ ಜಿಶಾನ್ ಆಯುಬ್, ದಿವ್ಯಾ ದತ್ತಾ, ನೇಹಾ ಶರ್ಮಾ ಅವರು ರೈತರ ಕುರಿತು ರಿಹನ್ನಾ ತೋರಿದ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲಿಸುವುದಾಗಿ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications