ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಪ್ರಾರಂಭ ಆಗಲಿದೆಯಂತೆ

|
Google Oneindia Kannada News

ನವದೆಹಲಿ, ಮೇ 23: ಕೊರೊನಾ ಲಾಕ್‌ಡೌನ್ ಆರಂಭವಾದಾಗಿನಿಂದ ಅಂತಾರಾಷ್ಟ್ರೀಯ ವಿಮಾನಗಳು ಸಂಚಾರ ಸ್ಥಗಿತಗೊಳಿಸಿವೆ. ಯಾವಾಗ ಪುನಾರಂಭವಾಗುತ್ತದೆ ಎಂಬ ಕುತೂಹಲಕ್ಕೆ ಕೇಂದ್ರ ಸರ್ಕಾರ ಇಂದು ಸುಳಿವು ಬಿಟ್ಟು ಕೊಟ್ಟಿದೆ.

ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಅವರು ಆಗಸ್ಟ್ ಮೊದಲ ವಾರದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ಪುನರಾರಂಭಿಸುವುದಾಗಿ ಹೇಳಿದ್ದಾರೆ. ಶನಿವಾರ ಫೇಸ್‌ಬುಕ್‌ ಲೈವ್‌ನಲ್ಲಿ ಜನರು ಕೇಳಿದ ಪ್ರಶ್ನೆಗೆ ಈ ಮಾಹಿತಿ ನೀಡಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕೊರೊನಾ ಸೋಂಕು ಪತ್ತೆ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕೊರೊನಾ ಸೋಂಕು ಪತ್ತೆ

ಆಗಸ್ಟ್ ಮೊದಲ ವಾರದಲ್ಲಿ ನಾವು ಉತ್ತಮ ಸಂಖ್ಯೆಗಳ ವಿಮಾನಗಳೊಂದಿಗೆ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆಯನ್ನು ಆರಂಭಿಸಲು ಪ್ರಯತ್ನಿಸುತ್ತೇವೆ ಎಂದು ಪುರಿ ಫೇಸ್‌ಬುಕ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದ್ದಾರೆ.

 Internationl Flight Service Will Resume At Agust In India

ಮೇ 25 ರಿಂದ ದೇಶಿ ಪ್ರಯಾಣಿಕರ ವಿಮಾನಯಾನಕ್ಕೆ ಅವಕಾಶ ನೀಡಲಾಗಿದೆ. ಆರೋಗ್ಯ ಸೇತು ಅಪ್ಲಿಕೇಶನ್‌ನಲ್ಲಿ ಹಸಿರು ಸೂಚನೆ ಇರುವವರಿಗೆ ಕ್ವಾರಂಟೈನ್ ಇರುವುದಿಲ್ಲ. ಅದಾಗ್ಯೂ ರಾಜ್ಯಗಳಿಗೆ ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಪುರಿ ಹೇಳಿದ್ದಾರೆ.

English summary
Internationl Flight Service Will Resume At Agust In India. civil avation minister hardeep singh puri confirms it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X