• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಿ ಚಿದಂಬರಂರನ್ನು ತಿಹಾರ್ ಜೈಲಿಗೆ ಕಳುಹಿಸಿದ ರೋಸ್ ಅವಿನ್ಯೂ ಕೋರ್ಟ್

|

ನವದೆಹಲಿ, ಆಗಸ್ಟ್ 05: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಗುರುವಾರದಂದು ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಸಿಕ್ಕ ಬೆನ್ನಲ್ಲೇ ರೋಸ್ ಅವಿನ್ಯೂ ಕೋರ್ಟ್ ವರನ್ನು ತಿಹಾರ್ ಜೈಲಿಗೆ ಕಳುಹಿಸಿದೆ.

"ತಿಹಾರ್ ಜೈಲಿನ ವಿಶೇಷ ಕೊಠಡಿಯಲ್ಲಿ ಚಿದಂಬರಂಗೆ ನ್ಯಾಯಾಂಗ ಬಂಧನಕ್ಕೊಳಪಡಲಿದ್ದಾರೆ. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಸೆಪ್ಟೆಂಬರ್ 19ರ ತನಕ ಜೈಲುವಾಸ ಅನುಭವಿಸಬೇಕಿದೆ" ಎಂದು ವಿಶೇಷ ಜಡ್ಜ್ ಅಜಯ್ ಕುಮಾರ್ ಕುಹರ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಪಿ ಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿ

ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ನಿರಾಶೆಯಾಗಿದೆ.

"ಪೊಲೀಸ್ ಕಸ್ಟಡಿ ನಂತರ ನ್ಯಾಯಾಂಗ ಕಸ್ಟಡಿಗೆ ನೀಡಬೇಕು ಎಂಬ ನಿಯಮವಿದೆಯೇ? ನನ್ನ ಕಕ್ಷಿದಾರನಿಗೆ ವಿಶೇಷ ಕೊಠಡಿ ಅಗತ್ಯವಿದೆ. ಮಂಚ, ಪಾಶ್ಚಾತ್ಯ ಶೈಲಿ ಟಾಯ್ಲೆಟ್, ಔಷಧಿಗಳ ಪೂರೈಕೆ ಬೇಕಿದೆ,ನಮಗೆ ನ್ಯಾಯಾಂಗ ಬಂಧನ ಬೇಡ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಶರಣಾಗತನಾಗಲು ನನ್ನ ಕಕ್ಷಿದಾರ ಸಿದ್ಧ" ಎಂದು ಕೋರ್ಟ್ ಮುಂದೆ ಚಿದಂಬರಂ ಪರ ವಕೀಲ ಕಪಿಲ್ ಸಿಬಾಲ್ ವಾದಿಸಿದರು.

ಕಾರ್ತಿ ಇಂದ್ರಾಣಿ ಭೇಟಿ; ಚಿದು ಕಾರ್ಯತಂತ್ರ ರಹಸ್ಯ ಬಯಲು ಮಾಡಿದ 'ಇಡಿ'

ಸೆ.2ರಂದು ಮುಂದಿನ ಆದೇಶದ ತನಕ ಚಿದಂಬರಂ ಬಂಧಿಸಿ, ತಿಹಾರ್ ಜೈಲಿಗೆ ಕಳಿಸುವಂತಿಲ್ಲ ಎಂದು ತನಿಖಾ ಸಂಸ್ಥೆಗೆ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಹಾಗೂ ಆರ್ ಬಾನುಮತಿ ವರಿರುವ ನ್ಯಾಯಪೀಠವು ಸೂಚಿಸಿತ್ತು. ಗುರುವಾರದವರೆಗೂ ಕಸ್ಟಡಿಯಲ್ಲೇ ವಿಚಾರಣೆ ನಡೆಸಲು ಮಾತ್ರ ನಿರ್ದೇಶನ ನೀಡಲಾಗಿತ್ತು.

"ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದಾರೆ. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಕಪಿಲ್ ಸಿಬಾಲ್ ಈ ಮುಂಚೆ ವಾದಿಸಿದ್ದರು.

"ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು' ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Delhi: Rouse Avenue Court sends Congress leader & former Finance Minister P Chidambaram to judicial custody till September 19 in a case being probed by CBI in INX Media case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more