ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

INX media case: ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿಗೆ ಸಮನ್ಸ್

|
Google Oneindia Kannada News

ನವದೆಹಲಿ, ಮಾರ್ಚ್ 24: ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಏಪ್ರಿಲ್ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಯುಪಿಎ 1 ಅಧಿಕಾರದಲ್ಲಿದ್ದಾಗ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರು 2007ರಲ್ಲಿ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ಸುಮಾರು 305 ಕೋಟಿ ರುಗಳನ್ನು ವಿದೇಶದಿಂದ ಹೂಡಿಕೆ ರೂಪದಲ್ಲಿ ಪಡೆಯಲು ಅನುಮತಿ ದೊರಕಿಸಿಕೊಟ್ಟಿದ್ದರು.

ಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂ ಭ್ರಷ್ಟಾಚಾರದ ಹೆಜ್ಜೆಗಳುಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂ ಭ್ರಷ್ಟಾಚಾರದ ಹೆಜ್ಜೆಗಳು

2019ರಲ್ಲಿ ಆಗಸ್ಟ್ 21ರಂದು ಹೈಡ್ರಾಮಾ ನಡುವೆ ಪಿ ಚಿದಂಬರಂ ಅವರನ್ನು ದೆಹಲಿ ನಿವಾಸದಲ್ಲಿ ಸಿಬಿಐ ಬಂಧಿಸಿತ್ತು. ನಂತರ ತಿಹಾರ್ ಜೈಲಿನಲ್ಲಿದ್ದರು. ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2019ರ ಅಕ್ಟೋಬರ್ ತಿಂಗಳಲ್ಲಿ ಬಂಧಿಸಿತ್ತು. ಚಿದಂಬರಂ, ಕಾರ್ತಿ ಅಲ್ಲದೆ, ಕಾರ್ತಿ ಅವರ ಸಿಎ ಎಸ್ಎಸ್ ಭಾಸ್ಕರ್ ರಾಮನ್ ಅವರನ್ನು ಕೂಡಾ ಚಾರ್ಜ್ ಶೀಟ್ ನಲ್ಲಿ ಹೆಸರಿಸಿ ಜಾರಿ ನಿರ್ದೇಶನಾಲಯವು ಕೋರ್ಟಿಗೆ ವರದಿ ನೀಡಿತ್ತು. ಆದರೆ, ನಂತರ ಸಿಬಿಐ, ಜಾರಿ ನಿರ್ದೇಶನಾಲಯ ಪ್ರಕರಣ ಎರಡರಲ್ಲೂ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದಾರೆ.

ಮೀಡಿಯಾ ಕಂಪನಿಯಿಂದ ಕಮಿಷನ್

ಮೀಡಿಯಾ ಕಂಪನಿಯಿಂದ ಕಮಿಷನ್

2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು. ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.

ಇಂದ್ರಾಣಿ ಮುಖರ್ಜಿಯಾ ಹೇಳಿಕೆ

ಇಂದ್ರಾಣಿ ಮುಖರ್ಜಿಯಾ ಹೇಳಿಕೆ

ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮೊದಲು ಮಗ ಹಾಗೂ ಈಗ ಅಪ್ಪನ ಬಂಧನಕ್ಕೆ ಕಾರಣವಾಗಿದ್ದು, ಆ ಹೆಂಗಸು ನೀಡಿದ ತಪ್ಪೊಪ್ಪಿಗೆ ಹೇಳಿಕೆ. ಆ ಹೆಂಗಸು ಮತ್ತ್ಯಾರು ಅಲ್ಲ, ಇಂದ್ರಾಣಿ ಮುಖರ್ಜಿಯಾ, ಮಾಧ್ಯಮ ಲೋಕದ ದೊರೆ ಪೀಟರ್ ಮುಖರ್ಜಿಯಾ ಪತ್ನಿ, ತಮ್ಮ ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದು ನೆನಪಿರಬಹುದು. ಬೇನಾಮಿ ಕಂಪನಿ ಮೂಲಕ ಕಾರ್ತಿ ಚಿದಂಬರಂಗೆ ಇಂದ್ರಾಣಿ ನೆರವಾಗಲು ಮುಂದಾಗಿದ್ದರು.

ಕಾರ್ತಿ ಇಂದ್ರಾಣಿ ಭೇಟಿ; ಚಿದು ಕಾರ್ಯತಂತ್ರ ರಹಸ್ಯ ಬಯಲು ಮಾಡಿದ 'ಇಡಿ'ಕಾರ್ತಿ ಇಂದ್ರಾಣಿ ಭೇಟಿ; ಚಿದು ಕಾರ್ಯತಂತ್ರ ರಹಸ್ಯ ಬಯಲು ಮಾಡಿದ 'ಇಡಿ'

ಕಾರ್ತಿ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ

ಕಾರ್ತಿ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ

ಫೆಬ್ರವರಿ 17, 2018ರಲ್ಲಿ ಇಂದ್ರಾಣಿ ಅಪ್ರೂವರ್ ಆಗಿ CrPC ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಕಾರ್ತಿ ಚಿದಂಬರಂ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ ದಾಖಲಿಸಿದ್ದರಿಂದ ಪಿ ಚಿದಂಬರಂ ಬಂಧಿಸಲು ಸಾಧ್ಯವಾಗಿತ್ತು. ಇಂದ್ರಾಣಿ ನೀಡಿರುವ ಇಮೇಲ್ ಸಾಕ್ಷಿ, ಹೋಟೆಲ್ ಹಯಾತ್ ನಲ್ಲಿ ಭೇಟಿ, ಚಿದಂಬರಂ ನೀಡಿದ ಸೂಚನೆ, ಮುಂತಾದ ಸಾಕ್ಷಿಗಳೇ ಸದ್ಯಕ್ಕೆ ಇಡಿ ಹಾಗೂ ಸಿಬಿಐಗೆ ಪ್ರಮುಖ ಅಸ್ತ್ರಗಳಾಗಿವೆ.

ಏನಿದು ಹಗರಣ?

ಏನಿದು ಹಗರಣ?

ವಿದೇಶದಿಂದ ನೇರವಾಗಿ ಬಂಡವಾಳ ಹೂಡಿಕೆ ಅನುಮತಿ ಪಡೆದ ಐಎನ್ ಎಕ್ಸ್ ಮೀಡಿಯಾಕ್ಕೆ ಶೇ 26ರಷ್ಟು ಹೂಡಿಕೆಯನ್ನು ಐಎನ್ ಎಕ್ಸ್ ನ್ಯೂಸ್ ನಲ್ಲಿ ತೊಡಗಿಸಿಕೊಳ್ಳಲು ಮುಂದಾಗುತ್ತದೆ. ಆದಾಯ ತೆರಿಗೆ ಇಲಾಖೆ ಗಮನಕ್ಕೆ ಬಂದು ಹೂಡಿಕೆ ಕಷ್ಟವಾಗುತ್ತದೆ. ನಂತರ ಕಾರ್ತಿ ಎಂಟ್ರಿಯಾಗಿ 4.6 ಕೋಟಿ ರು ಹೂಡಿಕೆಗೆ FIPB ಅನುಮತಿ ಪಡೆದು 300 ಕೋಟಿ ವಿದೇಶಿ ಹೂಡಿಕೆ ಪಡೆಯಲಾಗಿದೆ ಎಂಬುದು ಆರೋಪ. ಈ ಡೀಲ್ ಪೂರ್ಣಗೊಳಿಸಲು ಮಧ್ಯವರ್ತಿ ಸಂಸ್ಥೆ, ಕಿಕ್ ಬ್ಯಾಕ್ ಪಡೆಯಲು ಬೇನಾಮಿ ಸಂಸ್ಥೆಯನ್ನು ಕಾರ್ತಿ ಸೂಚಿಸಿದ್ದರು ಎಂಬ ಆರೋಪವಿದೆ.

English summary
INX Media: Delhi court issues summons against P Chidambaram, son Karti and others in money laundering case asked to appear on April 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X