ಐಎನ್ಎಕ್ಸ್ ಮೀಡಿಯಾ ಕೇಸ್: ಚಿದಂಬರಂ, ಕಾರ್ತಿಗೆ ಖುದ್ದು ಹಾಜರಿಯಿಂದ ವಿನಾಯಿತಿ
ನವದೆಹಲಿ, ಏಪ್ರಿಲ್ 7: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮತ್ತು ಅವರ ಮಗ, ಸಂಸದ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯವೊಂದು ವಿನಾಯಿತಿ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಸಲ್ಲಿಸಿದ ಪೂರಕ ಆರೋಪಪಟ್ಟಿಯನ್ನು ಮಾರ್ಚ್ 24ರಂದು ನ್ಯಾಯಾಲಯ ಪರಿಗಣಿಸಿದ ಬಳಿಕ ಆರೋಪಿಗಳಾದ ಚಿದಂಬರಂ ಮತ್ತು ಕಾರ್ತಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
ತಂದೆ ಮತ್ತು ಮಗನ ಪರವಾಗಿ ಹಾಜರಿದ್ದ ವಕೀಲ ಅರ್ಷದೀಪ್ ಸಿಂಗ್ ಅವರು ಖುದ್ದು ಹಾಜರಿಯಿಂದ ಇಬ್ಬರಿಗೂ ವಿನಾಯಿತಿ ನೀಡುವಂತೆ ಕೋರಿದ್ದರು. ಅದಕ್ಕೆ ನ್ಯಾಯಾಧೀಶ ಎಂಕೆ ನಾಗಪಾಲ್ ಒಪ್ಪಿಗೆ ನೀಡಿದರು. ಇಬ್ಬರೂ ಅವರ ಪಕ್ಷದ 'ತಾರಾ ಪ್ರಚಾರಕ'ರಾಗಿದ್ದು, ತಮಿಳುನಾಡು ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ ಎಂದು ವಕೀಲರು ಹೇಳಿದ್ದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಲಾಗಿದೆ.

2019ರ ಆಗಸ್ಟ್ 21ರಂದು ಐಎನ್ಎಕ್ಸ್ ಮೀಡಿಯಾ ಕೇಸ್ನಲ್ಲಿ ಪಿ. ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. 2019ರ ಅಕ್ಟೋಬರ್ 16ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಇ.ಡಿ ಬಂಧಿಸಿತ್ತು. 2019ರ ಅಕ್ಟೋಬರ್ 22ರಂದು ಸಿಬಿಐ ಪ್ರಕರಣದಲ್ಲಿ ಮತ್ತು 2019ರ ಡಿ. 4ರಂದು ಇ.ಡಿ ಪ್ರಕರಣದಲ್ಲಿ ಜಾಮೀನು ದೊರಕಿತ್ತು.
ಚಿದಂಬರಂ ಅವರ ಮಗ ಕಾರ್ತಿ ಅವರನ್ನು 2018ರ ಫೆಬ್ರವರಿಯಲ್ಲಿ ಸಿಬಿಐ ಬಂಧಿಸಿತ್ತು. 2018ರ ಮಾರ್ಚ್ನಲ್ಲಿ ಅವರಿಗೆ ಜಾಮೀನು ಮಂಜೂರಾಗಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications