ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿ ಚಿದಂಬರಂಗೆ ಜಾಮೀನು ನಿರಾಕರಣೆ, ತಿಹಾರ್ ಜೈಲೇ ಗಟ್ಟಿ

|
Google Oneindia Kannada News

Recommended Video

ಜಾಮೀನು ಕೋರಿ ಅರ್ಜಿ ಹಾಕಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ನಿರಾಸೆ | Oneindia Kannada

ನವದೆಹಲಿ, ನವೆಂಬರ್ 15: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂಗೆ ನಿರಾಶೆಯಾಗಿದೆ.

ಪಿ ಚಿದಂಬರಂ ಸಲ್ಲಿಸಿದ್ದ ರೆಗ್ಯುಲರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ವಜಾಗೊಳಿಸಿದೆ. ಸದ್ಯ ಜಾರಿ ನಿರ್ದೇಶನಾಲಯದ ವಿಚಾರಣೆಗೊಳಪಟ್ಟಿರುವ ಚಿದಂಬರಂ ಅವರು ತಿಹಾರ್ ಜೈಲುವಾಸಿಯಾಗಿದ್ದಾರೆ.

ಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿ

ಇದಕ್ಕೂ ಮುನ್ನ ಅನಾರೋಗ್ಯದ ಕಾರಣ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದು ಕೂಡಾ ತಿರಸ್ಕೃತಗೊಂಡಿತ್ತು. ಆದರೆ, ದೆಹಲಿಯಲ್ಲಿ ವಾಯ ಮಾಲಿನ್ಯ ಅಪಾಯ ಮಟ್ಟ ಮೀರಿರುವ ಹಿನ್ನಲೆಯಲ್ಲಿ ಚಿದಂಬರಂಗೆ ಮಾಸ್ಕ್ ನೀಡಬೇಕು. ಕುಡಿಯಲು ಶುದ್ಧ ನೀರನ್ನು ತಿಹಾರ್ ಜೈಲಿನಲ್ಲಿ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿತ್ತು.

INX Media Case: Delhi HC dismisses regular bail to P Chidamabaram

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ 74 ವರ್ಷ ವಯಸ್ಸಿನ ಪಿ ಚಿದಂಬರಂ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಹೈಕೋರ್ಟ್ ಈಗಾಗಲೇ ಅನುಮತಿ ನೀಡಿದೆ.

ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದರು. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಾಲ್ ಈ ಮುಂಚೆ ವಾದಿಸಿದ್ದರು.

ಸಂಜಯ್ ಗಾಂಧಿಯಿಂದ ಡಿಕೆಶಿವರೆಗೆ, ತಿಹಾರ್ ಜೈಲಲ್ಲಿ ಕಂಬಿ ಎಣಿಸಿದ ಘಟಾನುಘಟಿಗಳು...ಸಂಜಯ್ ಗಾಂಧಿಯಿಂದ ಡಿಕೆಶಿವರೆಗೆ, ತಿಹಾರ್ ಜೈಲಲ್ಲಿ ಕಂಬಿ ಎಣಿಸಿದ ಘಟಾನುಘಟಿಗಳು...

"ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು" ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿತ್ತು.

English summary
INX Media Case: Delhi High Court dismisses regular bail to former union minister & Congress leader P Chidambaram. He is currently lodged at Tihar jail in ED case of INX Media case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X